“ಬಣಕಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ : ಗ್ಯಾರಂಟಿ ಸಮಿತಿ ಅಧ್ಯಕ್ಷರ ಪುನರ್‌ನಿಯುಕ್ತಿಗೆ ಒತ್ತಾಯ, ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಚರ್ಚೆ.”
1 min read
ಬಣಕಲ್:ಬಣಕಲ್ ಹೋಬಳಿ ಕಾಂಗ್ರೆಸ್ ವತಿಯಿಂದ ದಿನಾಂಕ 22/07/2026ರ ಬುಧವಾರದಂದು ಬಣಕಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಲಾಯಿತು.ಸಭೆಯಲ್ಲಿ ಬಣಕಲ್ ಹೋಬಳಿಯ ಎಲ್ಲಾ ಏಳು ಗ್ರಾಮ ಪಂಚಾಯಿತಿಗಳಿಂದ ಸುಮಾರು 250ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು,ಮುಖಂಡರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.
ಸಭೆಯ ಪ್ರಮುಖ ಉದ್ದೇಶವಾಗಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಕಾರ್ಯಕರ್ತರಿಗೆ ಮಾಹಿತಿ ನೀಡಲಾಯಿತು. ಜೊತೆಗೆ ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಚರ್ಚೆ ನಡೆಸಲಾಯಿತು.ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಜಯರಾಮ್ ಗೌಡ ಅವರನ್ನು ತೆರವುಗೊಳಿಸಿರುವ ಕ್ರಮವನ್ನು ಖಂಡಿಸಿ,ಅವರನ್ನು ಪುನಃ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಬೇಕು ಎಂದು ಕಾರ್ಯಕರ್ತರು ಒಮ್ಮತದ ನಿರ್ಣಯ ಕೈಗೊಂಡರು.ಇದೇ ವೇಳೆ ಬಣಕಲ್ ಹೋಬಳಿ ಕಾಂಗ್ರೆಸ್ ಅಧ್ಯಕ್ಷರಾಗಿ ಸುಬ್ರಮಣ್ಯ ಅವರನ್ನು ಮುಂದುವರಿಸಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ಬಿ.ನಿಂಗಯ್ಯ,ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಗೌಡ,ಹಿರಿಯ ಕಾಂಗ್ರೆಸ್ ಮುಖಂಡ ಎಂ.ಪಿ. ಮನುಗೌಡ,ಕೆಂಜಿಗೆ ವಿನಯ್ ಗೌಡ,ಅಲ್ಪಸಂಖ್ಯಾತರ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಇರ್ಫಾನ್,ವಿನಯ್ ಕುಮಾರ್,ಎಂ.ಎಸ್. ಅನಂತ್,ಬಿ.ಎ.ಉಮರ್,ಸಿ.ಕೆ. ಇಬ್ರಾಹಿಂ,ಕುಂದೂರು ಸುಂದರೇಶ್ ಗೌಡ,ಹೊಸಳ್ಳಿ ಮಾಧವ ಗೌಡ,ಹೊಸಳ್ಳಿ ಚಂದ್ರೇಗೌಡ,ಎ.ಸಿ. ಅಯೂಬ್ ಚಕ್ಕಮಕ್ಕಿ,ತರುವೆ ರಾಮಚಂದ್ರ ಗೌಡ,ಕೊಟ್ಟಿಗೆಹಾರ ಅಜೀಜ್,ದಿಲ್ದಾರ್ ಬೇಗಂ,ಮರುಗುಂದ ಪ್ರಸನ್ನ,ತರುವೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು,ಸದಸ್ಯರು,ಬೂತ್ ಅಧ್ಯಕ್ಷರು,ಘಟಕ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.
ನ್ಯೂಸ್ ಬ್ಯೂರೋ,ಅವಿನ್ ಟಿವಿ.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

