AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ತೋಳೂರು: ಗೃಹಲಕ್ಷ್ಮಿ ಸಂಭ್ರಮೋತ್ಸವದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ…

1 min read

ತೋಳೂರು: ಗೃಹಲಕ್ಷ್ಮಿ ಸಂಭ್ರಮೋತ್ಸವದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ
————————
“ಪಂಚ ಗ್ಯಾರಂಟಿಗಳಿಂದ ಜನರಿಗೆ ಅನುಕೂಲ”

ಆಲ್ದೂರು: ಸಮೀಪದ ಸತ್ತಿಹಳ್ಳಿ ಪಂಚಾಯಿತಿ ವ್ಯಾಪ್ತಿಯ ತೋಳೂರು ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಸಂಭ್ರಮೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು.

ಸರ್ಕಾರದ ಪಂಚ ಗ್ಯಾರಂಟಿಗಳಿಂದ ರಾಜ್ಯದ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಅದರಲ್ಲೂ ಗೃಹ ಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಸಾಕಷ್ಟು ಪ್ರಯೋಜನವಾಗಿದೆ ಎಂದು ಮಾಚಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿ ಪಿಡಿಒ ಸುರಯ್ಯ ಭಾನು ಅವರು ಹೇಳಿದರು.

ಗೃಹಲಕ್ಷ್ಮಿ ಯೋಜನೆ ಅನುಷ್ಠಾನದ ಮೂರನೇ ವರ್ಷಾಚರಣೆ ಅಂಗವಾಗಿ ಪಂಚ ಗ್ಯಾರಂಟಿಗಳ ಅನುಷ್ಠಾನ ಸಮಿತಿ ಚಿಕ್ಕಮಗಳೂರು ತಾಲೂಕು, ತಾಲೂಕು ಪಂಚಾಯಿತಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಚಿಕ್ಕಮಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ತೊಳೂರಿನ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಸಂಭ್ರಮೋತ್ಸವದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರವು ಜಾರಿ ಮಾಡಿದ ಗ್ಯಾರಂಟಿ ಯೋಜನೆಗಳು ಮನೆ ಮನೆಗಳನ್ನು ತಲುಪುತ್ತಿವೆ. ಇದರ ಲಾಭವನ್ನು ಸಾಕಷ್ಟು ಜನರು ಪಡೆಯುತ್ತಿದ್ದಾರೆ. ಇದರನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮೇಲ್ವಿಚಾರಕಿ ಶಾರದ ಅವರು, ಗೃಹಲಕ್ಷ್ಮಿ ಗ್ಯಾರಂಟಿಯಡಿ ನೀಡಲಾಗುತ್ತಿರುವ ಎರಡು ಸಾವಿರದಿಂದ ಸಾಕಷ್ಟು ಕುಟುಂಬಗಳಿಗೆ ದಿನನಿತ್ಯದ ವೆಚ್ಚಕ್ಕೆ ಸಹಾಯವಾಗಿದೆ. ಈ ಹಣವನ್ನು ಕೆಲವರು ಆಸ್ಪತ್ರೆ ವೆಚ್ಚಕ್ಕೆ, ಕೆಲವರು ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಸುತಿದ್ದಾರೆ. ಸರ್ಕಾರದ ಹಣವನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಳ್ಳಿ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಟಿ ಜಿ ಸತ್ಯನಾರಾಯಣ,ವಿಶ್ವ, ಗುರುವಪ್ಪ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುಮಿತ್ರಾ, ಶಾಲಾ ಮುಖ್ಯಶಿಕ್ಷಕಿ ಪ್ರತಿಮಾ, ಸಹ ಶಿಕ್ಷಕಿ ತನುಜಾ, ಅಂಗನವಾಡಿ ಕಾರ್ಯಕರ್ತೆ ತುಳಸಿ ಎಂ, ಎಂ. ಜಿ ಹಳ್ಳಿ ವೃತ್ತದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಗೃಹಲಕ್ಷ್ಮಿ ಫಲಾನುಭವಿಗಳು, ಗ್ರಾಮಸ್ಥರು, ಪೋಷಕರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

You may have missed