लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಗೆಲುವು ಮತ್ತು ನಿರಾಸೆ ಈ ಎರಡರ ಮಧ್ಯೆ ಗಾಯತ್ರಿ ಶಾಂತೇಗೌಡ ವಿಧಾನಪರಿಷತ್ತು ಸದಸ್ಯರಾಗಿ ಪ್ರಮಾಣವಚನ.”

1 min read

ಅವಿನ್ ಟಿವಿ ಸುದ್ದಿಜಾಲ : ಬೆಂಗಳೂರು, ಆ. 7: ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್ತು ಸದಸ್ಯರಾಗಿ ಆಯ್ಕೆಯಾಗಿರುವ ಗಾಯತ್ರಿ ಶಾಂತೇಗೌಡ ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಪರಿಷತ್ತು ಸಭಾಪತಿಯ ಕಚೇರಿ ಸಭಾಂಗಣದಲ್ಲಿ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.ಪ್ರಮಾಣವಚನವನ್ನು ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರು ಬೋಧಿಸಿದರು.

ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯ ತೀವ್ರ ಕುತೂಹಲ ಕೆರಳಿಸಿದ್ದ ಕಾನೂನು ಹೋರಾಟದಲ್ಲಿ ಕಾಂಗ್ರೆಸ್‌ನ ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ಐತಿಹಾಸಿಕ ಗೆಲುವನ್ನು ಹೈಕೋರ್ಟ್‌ ಹಾಗೂ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ನಡೆದ ಮರು ಮತ ಎಣಿಕೆಯಲ್ಲಿ ಅವರ ಜಯವನ್ನು ಅಧಿಕೃತವಾಗಿ ಎತ್ತಿಹಿಡಿಯಲಾಗಿತ್ತು, ಹೀಗಾಗಿ ಇಂದು ಅವರು ಬೆಂಗಳೂರಿನಲ್ಲಿ ಅವರು ವಿಧಾನ ಪರಿಷತ್ ಸದಸ್ಯೆಯಾಗಿ (MLC) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಜೆಪಿಯ ಎಂ.ಕೆ.ಪ್ರಾಣೇಶ್ ವಿರುದ್ಧ ನಡೆದ ಈ ಸುದೀರ್ಘ ಕಾನೂನು ಕದನದಲ್ಲಿ ಹೈಕೋರ್ಟ್ ನೀಡಿದ ಮಹತ್ವದ ಆದೇಶದ ಬಳಿಕ,9 ಮತಗಳ ಅಂತರದಿಂದ ಗಾಯತ್ರಿ ಶಾಂತೇಗೌಡ ಅವರು ಜಯಭೇರಿ ಬಾರಿಸಿದ್ದರು.

ಕಾನೂನು ಸಮರದ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ಗಾಯತ್ರಿ ಶಾಂತೇಗೌಡ ಅವರು ವಿಧಾನಪರಿಷತ್ತು ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಪಟ್ಟಿಯಲ್ಲಿ ಅವರ ಹೆಸರು ಘೋಷಣೆಯಾಗಿ ಅಚ್ಚರಿ ಮೂಡಿಸಿತ್ತು. ಆದರೆ ರಾಜಕೀಯದ ಕ್ಷಿಪ್ರ ಬೆಳವಣಿಗೆಗಳಿಂದಾಗಿ ಅಂತಿಮ ಹಂತದಲ್ಲಿ ಅವರ ಹೆಸರು ಕೈಬಿಟ್ಟಿದ್ದರಿಂ ಸಚಿವ ಸ್ಥಾನದ ಬಹುದೊಡ್ಡ ಅವಕಾಶವೊಂದು ಕೊನೆಯ ಕ್ಷಣದಲ್ಲಿ ದಿಢೀರನೆ ಕೈತಪ್ಪಿಹೋಗಿದ್ದು ಅವರಿಗೆ ಭಾರಿ ನಿರಾಸೆಯಾಗಿದೆ. ಇದರಿಂದಾಗಿ ಎಂಎಲ್ಸಿ ಆಗುತ್ತಿರುವ ಸಂಭ್ರಮದ ನಡುವೆಯೂ, ಸಚಿವ ಸ್ಥಾನ ಸ್ವಲ್ಪದರಲ್ಲೇ ತಪ್ಪಿಹೋದ ಬೇಸರ ಕೂಡ ಆಗಿದೆ.

2021ರ ವಿಧಾನಪರಿಷತ್ತು ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಿರುವುದನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣದ ಅಂತಿಮ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬಿಜೆಪಿ ಸದಸ್ಯ ಎಂ.ಕೆ. ಪ್ರಾಣೇಶ್ ಅವರ ಆಯ್ಕೆಯನ್ನು ರದ್ದುಗೊಳಿಸಿ, ಗಾಯತ್ರಿ ಶಾಂತೇಗೌಡ ಅವರನ್ನೇ ವಿಜೇತ ಅಭ್ಯರ್ಥಿಯಾಗಿ ಘೋಷಿಸಿತ್ತು. ಬಳಿಕ ಚುನಾವಣಾ ಆಯೋಗ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಅವರು ಇಂದು ಅಧಿಕೃತವಾಗಿ ವಿಧಾನಪರಿಷತ್ತು ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ಸಂದರ್ಭದಲ್ಲಿ ಹಾಜರಿದ್ದು ಹಾರೈಸಿದರು.ಪ್ರಮಾಣವಚನ ಸಮಾರಂಭದಲ್ಲಿ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ವಿಧಾನಪರಿಷತ್ತು ಸದಸ್ಯರು, ಅಧಿಕಾರಿಗಳು, ಬೆಂಬಲಿಗರು ಮತ್ತು ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಗಾಯತ್ರಿ ಶಾಂತೇಗೌಡ ಅವರ ಪ್ರಮಾಣವಚನದೊಂದಿಗೆ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ವರ್ಷಗಳ ಕಾನೂನು ಹೋರಾಟಕ್ಕೆ ಅಂತ್ಯ ದೊರೆತಂತಾಗಿದೆ.

••••••••••

✍🏻ಬರಹ ಕೃಪೆ.✍🏻

ಡಿ.ಎಂ.ಮಂಜುನಾಥಸ್ವಾಮಿ.

ಅವಿನ್ ಟಿವಿ ಸುದ್ದಿಜಾಲ.

ಚಿಕ್ಕಮಗಳೂರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಸ್ಥಾನಿಕ ಸಂಪಾದಕರು.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

About Author

Leave a Reply

Your email address will not be published. Required fields are marked *

You may have missed