लाइव कैलेंडर

August 2026
M T W T F S S
 12
3456789
10111213141516
17181920212223
24252627282930
31  
18/08/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಸಾರ್ವಜನಿಕ ಕಾಳಜಿಗೆ ಮಾದರಿಯಾದ ಖಾಸಗಿ ವ್ಯಕ್ತಿಗಳು : ಕಾಂಕ್ರೀಟ್ ಹಾಕಿ ರಸ್ತೆ ಗುಂಡಿ ಮುಚ್ಚಿದ ದಾನಿಗಳು.”

1 min read

ಮೂಡಿಗೆರೆ: ಪಟ್ಟಣದ ಕೆ.ಎಂ.ರಸ್ತೆಯ ಮಟನ್ ಮಾರ್ಕೆಟ್ ಮುಂಭಾಗದಲ್ಲಿ ಭಾರಿ ಗುಂಡಿಗಳು ನಿರ್ಮಾಣವಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು. ಗುಂಡಿಗಳಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು.

ಸಾರ್ವಜನಿಕರ ತೊಂದರೆಯನ್ನು ಮನಗಂಡ ಕೃಷ್ಣಾಪುರದ ಹಾರ್ಡ್‌ವೇರ್ ಅಂಗಡಿ ಮಾಲೀಕ ಅಲ್ ಮಜೀದ್ ಹಾಗೂ ಬೆಳ್ತಂಗಡಿಯ ನೂರಾ ಗೋಲ್ಡ್ ಮಾಲೀಕರು ತಮ್ಮ ಸ್ವಂತ ಖರ್ಚಿನಲ್ಲಿ ರಸ್ತೆ ಗುಂಡಿಗಳನ್ನು ಕಾಂಕ್ರೀಟ್ ಹಾಕುವ ಮೂಲಕ ಮುಚ್ಚಿಸಿ ಸಾರ್ವಜನಿಕ ಕಾಳಜಿ ಮೆರೆದಿದ್ದಾರೆ.

ಸುಮಾರು 10 ಮೀಟರ್ ಉದ್ದ ಮತ್ತು ಅಗಲದ ಪ್ರದೇಶಕ್ಕೆ ಒಂದು ಲಕ್ಷಕ್ಕೂ ಅಧಿಕ ರೂಪಾಯಿ ವೆಚ್ಚದಲ್ಲಿ ಗುಣಮಟ್ಟದ ಕಾಂಕ್ರೀಟ್ ಹಾಕಿ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಈ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಿದ್ದಾರೆ.

ಕಾಮಗಾರಿ ನಡೆಯುವ ಸಂದರ್ಭದಲ್ಲಿ ಮೂಡಿಗೆರೆ ಪೊಲೀಸರು ಸ್ಥಳದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಸುಗಮವಾಗಿ ಕಾಮಗಾರಿ ನಡೆಯಲು ಹಾಗೂ ವಾಹನ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಿದರು.

ಸಾರ್ವಜನಿಕರ ಹಿತದೃಷ್ಟಿಯಿಂದ ಸ್ವಂತ ಹಣವನ್ನು ಖರ್ಚು ಮಾಡಿ ರಸ್ತೆ ಗುಂಡಿಗಳನ್ನು ಮುಚ್ಚಿಸಿದ ಅಲ್ ಮಜೀದ್ ಹಾಗೂ ನೂರಾ ಗೋಲ್ಡ್ ಮಾಲೀಕರ ಕಾರ್ಯಕ್ಕೆ ಮೂಡಿಗೆರೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಾಮಾಜಿಕ ಸಕ್ರಿಯ ಸೇವಾ ಸಂಸ್ಥೆಯ ತಂಡದವರು ಸೇರಿದಂತೆ ಸಾರ್ವಜನಿಕರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

✍ಬರಹ ಕೃಪೆ.✍

ಸಿದ್ದಿಕ್ ಚಕ್ಕಮಕ್ಕಿ.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಸ್ಥಾನಿಕ ಸಂಪಾದಕರು.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

About Author

Leave a Reply

Your email address will not be published. Required fields are marked *