लाइव कैलेंडर

August 2026
M T W T F S S
 12
3456789
10111213141516
17181920212223
24252627282930
31  
24/08/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಸದನದಲ್ಲಿ ನಯನಾ ಮೋಟಮ್ಮ ಆಗ್ರಹ.”

1 min read

ಮೂಡಿಗೆರೆ:ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಹೆಚ್ಚಿನ ವೇತನ ನೀಡುವುದರ ಜೊತೆಗೆ,ಅವರಿಗೆ ನೀಡುತ್ತಿರುವ ಸೌಲಭ್ಯಗಳನ್ನು ಹೆಚ್ಚಿಸಬೇಕು ಎಂದು ಮೂಡಿಗೆರೆಯ ಶಾಸಕಿ ನಯನಾ ಮೋಟಮ್ಮ ಅವರು ವಿಧಾನಮಂಡಲದ ಸದನದಲ್ಲಿ ಸರ್ಕಾರದ ಗಮನ ಸೆಳೆದರು.

ಗುರುವಾರ ವಿಧಾನಮಂಡಲದ ಸದನದಲ್ಲಿ ಚುಕ್ಕಿ ಗುರುತಿನ ಪ್ರಶ್ನೆ ಮೂಲಕ ವಿಷಯ ಪ್ರಸ್ತಾಪಿಸಿದ ಶಾಸಕಿ ನಯನಾ ಮೋಟಮ್ಮ, ಅತಿಥಿ ಉಪನ್ಯಾಸಕರಿಗೆ ಕನಿಷ್ಠ ವೇತನ ನೀಡಬೇಕು.ಅವರ ಸೇವಾ ಜೇಷ್ಠತೆಯನ್ನು ಪರಿಗಣಿಸಬೇಕು.ಮಹಿಳಾ ಅತಿಥಿ ಉಪನ್ಯಾಸಕರಿಗೆ ಹೆರಿಗೆ ರಜೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರಿಗೆ ತೋಟದ ಕಾರ್ಮಿಕರಿಗಿಂತಲೂ ಕಡಿಮೆ ವೇತನ ನೀಡಲಾಗುತ್ತಿದೆ. ಉನ್ನತ ವ್ಯಾಸಂಗ ಮಾಡಿರುವ ಅತಿಥಿ ಉಪನ್ಯಾಸಕರಿಗೆ ಅವರ ಶೈಕ್ಷಣಿಕ ಅರ್ಹತೆ ಹಾಗೂ ಸೇವೆಗೆ ಅನುಗುಣವಾಗಿ ಗೌರವಯುತ ವೇತನ ನೀಡಬೇಕು ಎಂದು ನಯನಾ ಮೋಟಮ್ಮ ಸದನದಲ್ಲಿ ಆಗ್ರಹಿಸಿದರು.

ಮುಂದಿನ ದಿನಗಳಲ್ಲಿ ವೇತನ ಹೆಚ್ಚಳ:ಮಧು ಬಂಗಾರಪ್ಪ.

ಶಾಸಕಿ ನಯನಾ ಮೋಟಮ್ಮ ಅವರ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅತಿಥಿ ಉಪನ್ಯಾಸಕರ ವೇತನವನ್ನು ₹12 ಸಾವಿರದಿಂದ ₹14 ಸಾವಿರಕ್ಕೆ ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವೇತನ ಹೆಚ್ಚಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಅತಿಥಿ ಉಪನ್ಯಾಸಕರ ಸಮಸ್ಯೆ ಹಾಗೂ ಶಾಸಕಿ ನಯನಾ ಮೋಟಮ್ಮ ಅವರು ಸದನದಲ್ಲಿ ಪ್ರಸ್ತಾಪಿಸಿರುವ ವಿಚಾರ ಗಂಭೀರವಾಗಿದೆ. ಅವರ ಬೇಡಿಕೆಯನ್ನು ಆದ್ಯತೆಯ ಮೇಲೆ ಪರಿಗಣಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ಶಾಸಕಿ ನಯನಾ ಮೋಟಮ್ಮಗೆ ಅಭಿನಂದನೆ.

ಅತಿಥಿ ಉಪನ್ಯಾಸಕರ ಪರವಾಗಿ ಸದನದಲ್ಲಿ ಧ್ವನಿ ಎತ್ತಿ ಅವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದ ಶಾಸಕಿ ನಯನಾ ಮೋಟಮ್ಮ ಅವರಿಗೆ ಅತಿಥಿ ಉಪನ್ಯಾಸಕರ ಸಂಘಟನೆಯ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಸ್ಥಾನಿಕ ಸಂಪಾದಕರು.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

About Author

More Stories

Leave a Reply

Your email address will not be published. Required fields are marked *

You may have missed