लाइव कैलेंडर

August 2026
M T W T F S S
 12
3456789
10111213141516
17181920212223
24252627282930
31  
25/08/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಜೆಸಿಐ ಮೂಡಿಗೆರೆಯಿಂದ ‘ಜೆಸಿ ಸಪ್ತಾಹ–2026’ : ಸೆ.7ರಿಂದ 13ರವರೆಗೆ ವಿವಿಧ ಕಾರ್ಯಕ್ರಮ.”

1 min read

ಮೂಡಿಗೆರೆ:ಜೆಸಿಐ ಮೂಡಿಗೆರೆ ವತಿಯಿಂದ ‘ಜೆಸಿ ಸಪ್ತಾಹ–2026’ರ ಅಂಗವಾಗಿ ಸೆಪ್ಟೆಂಬರ್ 7ರಿಂದ 13ರವರೆಗೆ ವಿವಿಧ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಹಾಗೂ ಆ.30ರಂದು ಗ್ರಾಮೀಣ ಕ್ರೀಡೋತ್ಸವ : ಜೆಸಿ ಸಪ್ತಾಹದ ಪ್ರಯುಕ್ತ ಆಗಸ್ಟ್ 30ರಂದು ಗ್ರಾಮೀಣ ಕ್ರೀಡೋತ್ಸವವನ್ನೂ ಆಯೋಜಿಸಲಾಗಿದೆ. ಪುರುಷರು ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ಕ್ರೀಡಾ ಸ್ಪರ್ಧೆಗಳು ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವವರು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಆಯೋಜಕರು ತಿಳಿಸಿದ್ದಾರೆ.

ಜೆಸಿ ಸಪ್ತಾಹದ ಅಂಗವಾಗಿ ಸೆಪ್ಟೆಂಬರ್ 7ರಂದು ಬೆಳಿಗ್ಗೆ 10 ಗಂಟೆಯಿಂದ ಜನಪದ ಜಾಥಾ ಹಾಗೂ ವಿವಿಧ ಕಾರ್ಯಕ್ರಮಗಳ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಲಾಗುತ್ತದೆ. ಇದೇ ದಿನ ಬೆಳಿಗ್ಗೆ 11 ಗಂಟೆಗೆ ಸ್ವಚ್ಛತಾ ಉತ್ಸವ ಹಾಗೂ 11.30ಕ್ಕೆ ಮಹಿಳೆಯರಿಗೆ ಸಂಬಂಧಿಸಿದ ವಿಶೇಷ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30ಕ್ಕೆ ರೆಡ್‌ಕ್ರಾಸ್ ದಿನಾಚರಣೆ ಹಾಗೂ ಸಂಜೆ 7.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

 ಸೆ.8ರಂದು ಮಹಿಳಾ ಆರೋಗ್ಯ ಜಾಗೃತಿ ಕಾರ್ಯಕ್ರಮ.

ಸೆಪ್ಟೆಂಬರ್ 8ರಂದು ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10.30ಕ್ಕೆ ಮಹಿಳೆಯರ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ ಹಾಗೂ ಸಂಜೆ 7.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

 ಸೆ.9ರಂದು ಯುವಜನರಿಗೆ ಕಾರ್ಯಕ್ರಮ.

ಸೆಪ್ಟೆಂಬರ್ 9ರಂದು ಯುವಜನರನ್ನು ಕೇಂದ್ರೀಕರಿಸಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 10.30ಕ್ಕೆ ಯುವಜನರಿಗೆ ಸಂಬಂಧಿಸಿದ ಕಾರ್ಯಕ್ರಮ ಹಾಗೂ ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ 7.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸೆ.10ರಂದು ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ.

ಸೆಪ್ಟೆಂಬರ್ 10ರಂದು ಬೆಳಿಗ್ಗೆ 10.30ರಿಂದ ಶಾಲಾ ಮಕ್ಕಳಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ ಹಾಗೂ ರಾತ್ರಿ 7.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

 ಸೆ.11ರಂದು ಆರೋಗ್ಯ ಮತ್ತು ಮಾಧ್ಯಮ ಜಾಗೃತಿ.

ಸೆಪ್ಟೆಂಬರ್ 11ರಂದು ಬೆಳಿಗ್ಗೆ 10.30ರಿಂದ ಆರೋಗ್ಯ ಹಾಗೂ ವಿವಿಧ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ ಮತ್ತು ರಾತ್ರಿ 7.30ಕ್ಕೆ ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

 ಸೆ.12ರಂದು ಪ್ರತಿಭಾ ಪ್ರದರ್ಶನ.

ಸೆಪ್ಟೆಂಬರ್ 12ರಂದು ಬೆಳಿಗ್ಗೆ 10.30ರಿಂದ ಮಕ್ಕಳಿಗಾಗಿ ಕವನಗೋಷ್ಠಿ ಹಾಗೂ ವಿವಿಧ ಪ್ರತಿಭಾ ಪ್ರದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ ಹಾಗೂ ರಾತ್ರಿ 7.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

 ಸೆ.13ರಂದು ಸಮಾರೋಪ.

ಸೆಪ್ಟೆಂಬರ್ 13ರಂದು ಸಂಜೆ 6.30ಕ್ಕೆ ಜೆಸಿ ಸಪ್ತಾಹದ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸಿ, ಸಪ್ತಾಹದ ಸಮಾರೋಪ ನೆರವೇರಿಸಲಾಗುತ್ತದೆ.ಜೆಸಿ ಸಪ್ತಾಹದ ಎಲ್ಲ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜೆಸಿಐ ಮೂಡಿಗೆರೆ ಅಧ್ಯಕ್ಷರಾದ ಜೆಸಿ ಸುನಿಲ್ ವಾಹಿನಿಯೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಾಗಿ 9731653666 ಹಾಗೂ 9019935301 ಸಂಪರ್ಕಿಸಬಹುದಾಗಿದೆ.

✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಸ್ಥಾನಿಕ ಸಂಪಾದಕರು.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

About Author

Leave a Reply

Your email address will not be published. Required fields are marked *

You may have missed