ರಕ್ತದಾನ ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ….
1 min read
ರಕ್ತದಾನ ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ
ಚಿಕ್ಕಮಗಳೂರು; ರಕ್ತದಾನ ಮನುಷ್ಯನ ದೇಹ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಅಲ್ಲದೇ ಹೃದಯಘಾತ ಹಾಗೂ ಕೊಲೆಸ್ಟ್ರಾಲ್ ಕಡಿಮೆಗೊಳಿಸಲು ರಕ್ತ ದಾನ ಪ್ರಮುಖ ವಿಧಾನ ಎಂದು ಜಿಲ್ಲಾ ಸರ್ಕಾರಿ ಆಸ್ಪತ್ರೆ ಆರೋಗ್ಯಾಧಿಕಾರಿ ಡಾ|| ಕಾರ್ತಿಕ್ ಹೇಳಿದರು.
ತಾಲ್ಲೂಕಿನ ಕಳಸಾಪುರ ಗ್ರಾಮದಲ್ಲಿ ಪ್ರಜಾಪಿತಾ ಬ್ರಹ್ಮಕುಮಾರೀಸ್, ಎನ್ಐಎಂಎ, ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ರಾ-ಜಯೋಗಿನಿ ಡಾ.ದಾದಿ ಪ್ರಕಾಶ್ಮಣಿಜೀರವರ 19ನೇ ಪಾವನ ಪುಣ್ಯಸ್ಮತಿ ದಿನದ ಅಂಗವಾಗಿ ನಡೆದ ರಕ್ತದಾನ ಮಹಾಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅ ವರು ಮಾತನಾಡಿದರು. ಆರೋಗ್ಯವಂತ ಯುವಕರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಇದು ಆರೋ ಗ್ಯದ ಮೇಲೆ ಯಾವುದೇ ತೊಂದರೆ ಆಗುವುದಿಲ್ಲ. ಜೊತೆಗೆ ಹೊಸಚೈತನ್ಯ ಮೂಡಿಸುತ್ತದೆ. ಈ ಬಗ್ಗೆ ಪ್ರತಿ ಯೊಬ್ಬರು ಅರಿತುಕೊಂಡು ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ತಿಳಿಸಿದರು.
ಜೀವ ರಕ್ತದಾನದಿಂದ ಸಂಕಷ್ಟದಲ್ಲಿರುವ ವ್ಯಕ್ತಿಗಳ ಉಳಿಸಬಹುದಾಗಿದ್ದು ಇದನ್ನರಿತು ಪ್ರತಿಯೊಬ್ಬರೂ ರಕ್ತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕು. ತುರ್ತು ಸಂದರ್ಭದಲ್ಲಿರುವ ವ್ಯಕ್ತಿಗಳಿಗೆ ರಕ್ತದಾನ ಮಾಡಿದರೆ ಒಂದು ಪ್ರಾಣ ಉಳಿಸಿದ ಪುಣ್ಯ ಲಭಿಸುತ್ತದೆ. ಹೀಗಾಗಿ ರಕ್ತದಾನ ಅತ್ಯಂತ ಶ್ರೇಷ್ಟವಾಗಿದೆ ಎಂದರು. ಬ್ರಹ್ಮಕುಮಾರೀಸ್ ಸಂಸ್ಥೆ ಜಿಲ್ಲಾ ಸಂಚಾಲಕಿ ಬಿ.ಕೆ.ಭಾಗ್ಯಲಕ್ಷ್ಮೀ ಮಾತನಾಡಿ ರಾ-ಜಯೋಗಿನಿ ಡಾ.ದಾದಿ ಪ್ರಕಾಶ್ ಮಣಿಜೀರವರ ಸ್ಮರಣಾರ್ಥ ಜಿಲ್ಲೆಯ ಹಲವು ಕಡೆಗಳಲ್ಲಿ ರಕ್ತದಾನ ಶಿಬಿರ ಆಯೋಜಿಸುವ ಮೂಲ ಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದು ಎಲ್ಲಾ ತಾಲ್ಲೂಕಿನಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.
ಕೆಲ ಅಪಘಾತ ಸಂದರ್ಭಗಳಲ್ಲಿ ರಕ್ತ ಸಿಗದೆ ಮೃತಪಡುತ್ತಿರುವ ಉದಾಹರಣೆಗಳು ನಮ್ಮ ಕಣ್ಮುಂದೆ ಕಾಣಸಿಗುತ್ತಿದ್ದು ಇದನ್ನ-ರಿತು ಸಂಘ ಸಂಸ್ಥೆಗಳು ಆಯೋಜಿಸುತ್ತಿರುವ ಶಿಬಿರಗಳಲ್ಲಿ ಪಾಲ್ಗೊಂಡು ರಕ್ತದಾನ ಮಾಡುವುದರ ಮೂಲಕ ಇತರರ ಜೀವ ಉಳಿಸಲು ನೆರವಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರೆಡ್ ಕ್ರಾಸ್ ಸಂಸ್ಥೆಯ ಪ್ರದೀಪ್ ಗೌಡ ಗ್ರಾಮಾಂತರ ಪ್ರದೇಶದಲ್ಲಿ ರಕ್ತದಾನ ಶಿಬಿರ ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದು ಯುವಕರಲ್ಲಿ ಹೆಚ್ಚು ಜಾಗೃತಿ ಮೂಡಿಸುವ ಜೊತೆಗೆ ಅಪಘಾತ ಸಂದರ್ಭದಲ್ಲಿ ರಕ್ತದಾನಕ್ಕೆ ಮುಂದಾಗಬೇಕೆಂಬ ಭಾವನೆ ಬರಲಿದೆ ಎಂದರು. ಕಾರ್ಯಕ್ರಮದಲ್ಲಿ ಕಳಸಾಪುರ ಪಿಡಿಓ ಚಂದನ್, ಲೈಪ್ ಕೇರ್ ಅನೀತ್ಕುಮಾರ್, ವಿನಾಯಕ ಪ್ರೌಢಶಾಲೆಯ ಕಾರ್ಯದರ್ಶಿ ಗಣೇಶ್, ಸಹ ಶಿಕ್ಷಕ ಕೆ.ಹೆಚ್.ಗಂಗಾಧರ್, ಬ್ರಹ್ಮಕುಮಾ ರೀಸ್ ಸಂಚಾಲಕಿ ಬಿ.ಕೆ.ಲೀಲ ಹಾಗೂ ಸ್ಥಳೀಯ ಗ್ರಾಮಸ್ಥರು ಸೇರಿದಂತೆ ಮುಂತಾದವರಿದ್ದರು.
ವರದಿ…
ರತ್ನನಾಗೇಶ್….ಚಿಕ್ಕಮಗಳೂರು.

