लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‌ಕಾಫಿನಾಡಿನಲ್ಲಿ ರಸ್ತೆ ಅವಾಂತರ ಚಿಕ್ಕಮಗಳೂರು: ರಸ್ತೆಗಳಲ್ಲಿ ಗುಂಡಿ ಇವೆಯೋ ಅಥವಾ ಗುಂಡಿಗಳಲ್ಲಿಯೇ ರಸ್ತೆ ಇದೆಯೋ ಎನ್ನುವ ಅನುಮಾನ…..

1 min read

‌ಕಾಫಿನಾಡಿನಲ್ಲಿ ರಸ್ತೆ ಅವಾಂತರ
ಚಿಕ್ಕಮಗಳೂರು: ರಸ್ತೆಗಳಲ್ಲಿ ಗುಂಡಿ ಇವೆಯೋ ಅಥವಾ ಗುಂಡಿಗಳಲ್ಲಿಯೇ ರಸ್ತೆ ಇದೆಯೋ ಎನ್ನುವ ಅನುಮಾನ­ ಕಾಫಿ ನಾಡಿನ ಜನರನ್ನು ಕಾಡುತ್ತಿದೆ‌. ಜಿಲ್ಲೆಯ ಹೆದ್ದಾರಿ ಸೇರಿದಂತೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳಲ್ಲಿಯೂ ಮೊಣಕಾಲುದ್ದದ ಗುಂಡಿಗಳು ಬಿದ್ದಿದ್ದು, ಜನ ಸಂಚಾರ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಜಿಲ್ಲೆಯ ಜನ ಪ್ರತಿನಿಧಿಗಳು ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಹೊಲದಗದ್ದೆ ಗಿರೀಶ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿರುವ ಹೆದ್ದಾರಿ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿಯೂ ಗುಂಡಿಗಳು ಬಿದ್ದು ಸಂಚಾರ ಸಾಧ್ಯವಾಗದಿರುವ ಸ್ಥಿತಿ ನಿರ್ಮಾಣವಾಗಿದೆ. ದ್ವಿಚಕ್ರ ವಾಹನ ಸವಾರರು ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ಪ್ರತಿದಿನ ಬೀಳುವುದು ಸಾಮಾನ್ಯ ಎನ್ನುವಂತಾಗಿದೆ. ಇನ್ನು ಕಾರಿನಲ್ಲಿ ಓಡಾಡುವವರ ಪಾಡಂತೂ ಹೇಳುತ್ತೀರದಾಗಿದೆ. ಚಿಕ್ಕಮಗಳೂರು ಜಿಲ್ಲೆಯ ರಸ್ತೆಗಳಲ್ಲಿ 50 ಕಿಲೋಮೀಟರ್ ಸಂಚಾರ ನಡೆಸಿದರೂ ಕಾರನ್ನು ರಿಪೇರಿಗೆ ಬಿಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಜನಪ್ರತಿನಿಧಿಗಳು ರಸ್ತೆ ದುರಸ್ತಿಗೆ ಶಂಕುಸ್ಥಾಪನೆ ನೆರವೇರಿಸಲು ಮಾತ್ರ ಸೀಮಿತರಾಗಿದ್ದಾರೆ. ಆದರೆ ಯಾವುದೇ ರಸ್ತೆಗಳು ದುರಸ್ತಿಯಾಗಿಲ್ಲ. ಗ್ರಾಮೀಣ ಭಾಗದ ರಸ್ತೆಗಳಿರಲಿ ಹೆದ್ದಾರಿಗಳೇ ಡಾಂಬರು ಕಾಣದೆ ಕೆಲ ವರ್ಷಗಳೇ ಕಳೆದಿದೆ. ಇದರಿಂದಾಗಿ ಪ್ರತಿದಿನ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ನಗರಕ್ಕೆ ಉದ್ಯೋಗಕ್ಕೆ ತೆರಳುವವರು ಪ್ರತಿದಿನ ಜನಪ್ರತಿನಿಧಿಗಳು ಹಾಗು ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಇನ್ನಾದರೂ ಎಚ್ಚೆತ್ತು ರಸ್ತೆಗಳ ದುರಸ್ತಿಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಿಂದ ಮೂಡಿಗೆರೆ, ಚಾರ್ಮಾಡಿ ಮಾರ್ಗವಾಗಿ ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಗುಂಡಿಮಯವಾಗಿದೆ. ಇದಲ್ಲದೆ ಚಿಕ್ಕಮಗಳೂರಿನಿಂದ ತರೀಕೆರೆ ಸಂಪರ್ಕಿಸುವ ರಸ್ತೆ ಹಾಗೂ ಚಿಕ್ಕಮಗಳೂರಿನಿಂದ ಮಲಂದೂರು ಮಾರ್ಗವಾಗಿ ಮುತ್ತೋಡಿ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಚಿಕ್ಕಮಗಳೂರು ಮಾರ್ಗವಾಗಿ ಆಲ್ದೂರು-ಶೃಂಗೇರಿ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚಾರವೇ ಸಾಧ್ಯವಿಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಗಳಲ್ಲದೆ ಗ್ರಾಮೀಣ ಭಾಗದ ಎಲ್ಲ ರಸ್ತೆಗಳ ಸ್ಥಿತಿಯೂ ಇದೇ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಆದರೆ ನಮ್ಮ ಜಿಲ್ಲೆಗೆ ಬಂದ ಪ್ರವಾಸಿಗರು ರಸ್ತೆಗಳ ಅವಾಂತರದ ಕಾರಣದಿಂದಾಗಿ ಪ್ರತಿದಿನ ಅಪಘಾತಕ್ಕೊಳಗಾಗುತ್ತಿರುವುದು ಸರ್ವೇ ಸಾಮಾನ್ಯ ಎನ್ನುವಂತಾಗಿದೆ. ಜಿಲ್ಲೆಯ ಪ್ರಕೃತಿ ಸೌಂದರ್ಯ ಸವಿಯಲು ಬಂದ ಪ್ರವಾಸಿಗರು ವಾಪಸ್ ಆಗುವಾಗ ಸರಿಯಾದ ರಸ್ತೆ ಕಾಮಗಾರಿ ಮಾಡದ ಜಿಲ್ಲೆಯ ಜನಪ್ರತಿನಿಧಿಗಳಿಗೆ ಶಾಪ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರ ತೋಟ ಮಲ್ಲಂದೂರು ಭಾಗದ ಮುತ್ತೋಡಿ ಸಮೀಪವಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಸಂಚಾರ ನಡೆಸುವ ರಸ್ತೆಯೇ ಗುಂಡಿಗಳ ಆಗರವಾಗಿದೆ. ಉಸ್ತುವಾರಿ ಸಚಿವರು ಆಗೊಮ್ಮೆ ಈಗೋಮ್ಮೆ ರಸ್ತೆ ಸಂಚಾರ ನಡೆಸುವುದರಿಂದ ಅವರಿಗೆ ಸಮಸ್ಯೆಯ ಅರಿವಾಗುತ್ತಿಲ್ಲ. ಅವರು ಹೆಲಿಕಾಫ್ಟರ್ ಬಿಟ್ಟು ಕಾರಿನಲ್ಲಿ ಓಡಾಟ ನಡೆಸಿದರೆ ಕಾಫಿನಾಡಿನ ರಸ್ತೆಗಳ‌ ಸಮಸ್ಯೆ ತಿಳಿಯುತ್ತದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಶೃಂಗೇರಿ, ಹೊರನಾಡು, ದತ್ತಪೀಠ, ಕಳಸೇಶ್ವರ ದೇವಾಲಯ ಸೇರಿದಂತೆ ಹತ್ತು ಹಲವು ಧಾರ್ಮಿಕ ಕ್ಷೇತ್ರಗಳಿವೆ. ದೇವರ ದರ್ಶನ ಪಡೆಯಲು ಆಗಮಿಸುವ ಪ್ರವಾಸಿಗರು ರಸ್ತೆ ಗುಂಡಿಗಳ‌ ಕಾರಣದಿಂದಾಗಿ ಸಮಸ್ಯೆ ಎದುರಿಸುತ್ತಿದ್ದಾರೆ. ಇದೆಲ್ಲವನ್ನೂ ಜನಪ್ರತಿನಿಧಿಗಳು ಮನಗಂಡು ಮೊದಲು ರಸ್ತೆಗಳ‌ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೊಲದಗದ್ದೆ ಗಿರೀಶ್ ಆಗ್ರಹಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed