ಕಾಫಿನಾಡು ಕಾಂಗ್ರೆಸ್ ಸಾರಥ್ಯಕ್ಕೆ ಹೆಚ್.ಪಿ. ಮಂಜೇಗೌಡ….
1 min read
- ಕಾಫಿನಾಡು ಕಾಂಗ್ರೆಸ್ ಸಾರಥ್ಯಕ್ಕೆ ಹೆಚ್.ಪಿ. ಮಂಜೇಗೌಡ
ಚಿಕ್ಕಮಗಳೂರು: ಮಾಜಿ ಪ್ರಧಾನಿ
ಇಂದಿರಾಗಾಂಧಿಯವರಿಗೆ ರಾಜಕೀಯವಾಗಿ ಪುನರ್ಜನ್ಮ ನೀಡಿದ ಜಿಲ್ಲೆ ಎಂಬ ಹೆಗ್ಗಳಿಕೆ ಹೊಂದಿರುವ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ ಆಯ್ಕೆಯಾಗಿದ್ದಾರೆ.
ಎಐಸಿಸಿ ಮಾಜಿ ಕಾರ್ಯದರ್ಶಿ ಮೋಹಂತಿ ಅವರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಸಮರ್ಥ ಅಭ್ಯರ್ಥಿಯ ಆಯ್ಕೆಗಾಗಿ ಸರ್ವೆ ನಡೆಸಲಾಗಿತ್ತು ಎನ್ನಲಾಗಿದ್ದು, ಮೂರು ಮಂದಿ ಮಹಿಳೆಯರು ಸೇರಿದಂತೆ ಒಟ್ಟು 21 ಮಂದಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರು.
ಆರಂಭದಲ್ಲಿ ವಿಧಾನ * ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ. ಶಿವಾನಂದಸ್ವಾಮಿ, ಕೆಪಿಸಿಸಿ ವಕ್ತಾರ ಕೊಪ್ಪದ ಸುಧೀರ್ ಕುಮಾರ್ ಮುರೋಳಿ, ಜಿಲ್ಲಾ ವಕ್ತಾರ ಎಂ.ಎಸ್. ಅನಂತ್ ಹಾಗೂ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ ನಯಾಜ್ ಅಹಮದ್ ಸೇರಿದಂತೆ ಹಲವರ ಹೆಸರುಗಳು ಮುಂಚೂಣಿಯಲ್ಲಿದ್ದವು.
ಹೆಚ್.ಪಿ. ಮಂಜೇಗೌಡ ಅವರ ರಾಜಕೀಯ ಪಯಣ ಪಕ್ಷದ ತಳಮಟ್ಟದ ಸಂಘಟನೆಯಿಂದ ಆರಂಭವಾಗಿದೆ. 1994ರಿಂದ 2004ರವರೆಗೆ ಹಂಪಾಪುರ ಬೂತ್ ಅಧ್ಯಕ್ಷರಾಗಿ ಅವರು, ಬಳಿಕ 200780 ಕಾರ್ಯನಿರ್ವಹಿಸಿದ 2010ರವರೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.
2011ರಿಂದ 2016ರವರೆಗೆ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಿದ ಮಂಜೇಗೌಡ, 2017.ರಿಂದ 2026.ರವರೆಗೆ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
’ಪಕ್ಷದ ಸಂಘಟನಾ ಚಟುವಟಿಕೆಗಳ ಜತೆಗೆ ಸ್ಥಳೀಯ ಸಂಸ್ಥೆಗಳಲ್ಲೂ ಅನುಭವ ಹೊಂದಿರುವ ಅವರು, ನಾಲ್ಕು ಬಾರಿ ಬೀಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು, ಒಂದು ಬಾರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ಐದು ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ, ಪಕ್ಷದ ಪರ ಇರುವ ರಾಜಕೀಯ ವಾತಾವರಣವನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮುಂದುವರಿಸುವುದು ಕಾಂಗ್ರೆಸ್‌ನ ಮುಂದಿರುವ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಮುಂದಿನ ಚುನಾವಣೆಯ ದೃಷ್ಟಿಯಿಂದ ಮಹತ್ವ ಪಡೆದಿದೆ.

