ಚಿಕ್ಕಮಂಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ ಕರ್ನಾಟಕ ನೀರಾವರಿ #avintvcom
1 min read
ದಿನಾಂಕ 14/12/2020 ರಂದು, ಭದ್ರಾ ಕಾಡ ಪ್ರಾಧಿಕಾರದ ವ್ಯಾಪ್ತಿಯ ಚಿಕ್ಕಮಂಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ ಕರ್ನಾಟಕ ನೀರಾವರಿ ಇಲಾಖೆಯವರು ಕೈಗೆತ್ತಿಕೊಂಡಿರುವ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿ ಯೋಜನೆಯ ಸಂಪೂರ್ಣ ಮಾಹಿತಿ ಪಡೆದು, ಗುಣಮಟ್ಟದ ವಿಚಾರದಲ್ಲಿ ಯಾವುದೇ ರಾಜಿಯ ಪ್ರಶ್ನೆ ಇಲ್ಲ, ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ, ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ರೈತರಿಗೆ ಶೀಘ್ರವೇ ಅನುಕೂಲ ಮಾಡಿಕೊಡುವಂತೆ ಸೂಚನೆ ನೀಡಿದರು.
ಇದಕ್ಕೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಧಿಕಾರಿಗಳು ನಿಮ್ಮ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇವೆ, ಯೋಜನೆ ಶೀಘ್ರವೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
2.ದಿನಾಂಕ 14/12/2020 ರಂದು, ಶಿವಮೊಗ್ಗ ತಾಲ್ಲೂಕು ಹೊಳೆಹೊನ್ನೂರು ಮತ್ತು ಗಾಜನೂರು ಜಿಲ್ಲಾ ಪಂಚಾಯತ್ ಕುಸ್ಕೂರು ಗ್ರಾಮದ ರೈತರು ಕಚೇರಿಗೆ ಭೇಟಿ ನೀಡಿ ತಮ್ಮ ಭಾಗದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ, ನೀರು ಬಳಕೆದಾರರ ಸಂಘಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.