ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ರಾಜ್ಯ ಕಾರ್ಯದರ್ಶಿ ಬಸವರಾಜು ಆಗ್ರಹ #avintvcom
1 min read
ಗ್ರಾಮೀಣ ಪ್ರದೇಶದ ರಂಗ ಕಲಾವಿದರಿಗೆ ಸರ್ಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು: ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ರಾಜ್ಯ ಕಾರ್ಯದರ್ಶಿ ಬಸವರಾಜು ಆಗ್ರಹ
ಸ್ಥಳ: ಜೋಯ್ಡಾ
ಹೌದು ಉತ್ತರ ಕನ್ನಡ ಜಿಲ್ಲೆಯ ಜೋಯ್ಡಾ ಪಟ್ಟಣಕ್ಕೆ ಭೇಟಿಕೊಟ್ಟು ಕಲಾವಿದ ರೊಂದಿಗೆ ಅವರ ಸಮಸ್ಯೆಗಳು ಹಾಗೂ ಬೇಡಿಕೆಗಳ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡಿ ಮಾತನಾಡಿದ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ರಾಜ್ಯ ಕಾರ್ಯದರ್ಶಿ ಶ್ರೀ ಬಸವರಾಜು ಮಾತನಾಡಿ ಇಂದು ಕಲೆಯನ್ನೇ ನಂಬಿ ಜೀವನ ನಡೆಸುತ್ತಿರುವ ಗ್ರಾಮೀಣ ಪ್ರದೇಶದ ರಂಗ ಕಲಾವಿದರ ಪರಿಸ್ಥಿತಿ ತುಂಬಾ ಶೋಚನೀಯವಾಗಿದ್ದು, ಕುಟುಂಬ ನಿರ್ವಹಣೆಗೂ ತೊಂದರೆಯಾಗಿ ಬೀದಿಗೆ ಬಂದು ನಿಂತಿದ್ದಾರೆ. ಆದರೇ ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಸರ್ಕಾರ ರಂಗ ಕಲಾವಿದರ ಹಿತ ಕಾಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು ಇರುತ್ತದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶದ ಕಲಾವಿದರಿಗಂತೂ ಯಾವುದೇ ರೀತಿಯ ಸರ್ಕಾರದ ಸೌಲಭ್ಯಗಳು ಮರೀಚಿಕೆ ಯಾಗಿದ್ದು ಇರುತ್ತದೆ. ಆದ್ದರಿಂದ ಸರ್ಕಾರವು ಗ್ರಾಮೀಣ ಪ್ರದೇಶದ ಕಲಾವಿದರ ಹಿತ ರಕ್ಷಣೆ ಮಾಡಿ ಅಗತ್ಯ ಸೌಲಭ್ಯಗಳನ್ನು ದೊರಕಿಸಿಕೊಡಬೇಕು ಎಂದು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಕಲಾವಿದರ ಪರವಾಗಿ ಮನವಿ ಮಾಡಿದರು ವಂದನೆಗಳು. ಶ್ರೀ ಬಸವರಾಜು. ಪತ್ರಕರ್ತರು ಹಾಗೂ ಹೋರಾಟಗಾರರು.