ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಚಟ್ನಳ್ಳಿ ಮಹೇಶ್…
1 min read
ಚಟ್ನಳ್ಳಿ ಮಹೇಶ್: ವಚನ ಸಾಹಿತ್ಯ ಮತ್ತು ಜಾನಪದ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಖ್ಯಾತ ವಾಗ್ಮಿ
ಆದ ಛಾಪು ಮೂಡಿಸಿರುವ ಹಾಗೂ ಪ್ರವಚನಕಾರ ಸಿ.ಬಿ. ಮಹೇಶ್ವರಪ್ಪ ಚಟ್ನಳ್ಳಿ (ಚಟ್ನಳ್ಳಿ ಮಹೇಶ್) ಅವರು ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಡೂರು ತಾಲೂಕಿನ ಚಟ್ನಳ್ಳಿ ಗ್ರಾಮದವರಾದ ಮಹೇಶ್ ಅವರು ಸತತ ಅಧ್ಯಯನ, ಸಾಹಿತ್ಯದ ಮೇಲಿನ ಅಪಾರ ಆಸಕ್ತಿ ಹಾಗೂ ಜೀವನಾನುಭವದ ಮೂಲಕ ಜ್ಞಾನ ಸಂಪಾದಿಸಿ ಕನ್ನಡ ನಾಡಿನ ನಿರರ್ಗಳ ವಾಗ್ನಿಯಾಗಿ ಗುರುತಿಸಿಕೊಂಡಿದ್ದಾರೆ. ರಾಜ್ಯ, ಹೊರರಾಜ್ಯ ಹಾಗೂ ವಿದೇಶಗಳಲ್ಲಿಯೂ ನೂರಾರು ಉಪನ್ಯಾಸಗಳನ್ನು ನೀಡುವ ಮೂಲಕ ಕನ್ನಡ ಸಾಹಿತ್ಯದ ಮೌಲ್ಯ, ಮಹತ್ವ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸಿದ್ದಾರೆ.
ವಚನ ಸಾಹಿತ್ಯ ಮತ್ತು ಜಾನಪದ ಸಾಹಿತ್ಯ ಇವರ ಆಸಕ್ತಿಯ ಪ್ರಮುಖ ಕ್ಷೇತ್ರಗಳಾಗಿವೆ. ದೂರದರ್ಶನದ ವಿವಿಧ ವಾಹಿನಿಗಳ ಸಾಹಿತ್ಯಕ ಹಾಗೂ ಅರ್ಥಪೂರ್ಣ ಚರ್ಚೆಗಳಲ್ಲಿ ಪಾಲ್ಗೊಂಡು, ಸಾಹಿತ್ಯದ ಗಹನ ವಿಚಾರಗಳನ್ನು ಸರಳವಾಗಿ ಮತ್ತು ಮನಮುಟ್ಟುವಂತೆ ವಿಶ್ಲೇಷಿಸುವ ಮೂಲಕ ಅಪಾರ ಜನಮನ್ನಣೆ ಗಳಿಸಿದ್ದಾರೆ. ಪ್ರವಚನಕಾರರಾಗಿ ಸಾಹಿತ್ಯದ ವಿಚಾರಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.

