लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
03/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

*ಕನ್ನಡ ರಾಜ್ಯೋತ್ಸವ ಹಾಗೂ ಮಲಬಾರ್ ಡೇ ಸಂಭ್ರಮಕ್ಕೆ ಸಮಾಜಮುಖಿ ಸೇವೆಯ ಸಾಥ್ : ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಸ್ವಚ್ಛತಾ ಅಭಿಯಾನ,ರೋಗಿಗಳಿಗೆ ಹಣ್ಣು ವಿತರಣೆ.*

1 min read

ಮಂಗಳೂರು : ಕನ್ನಡ ರಾಜ್ಯೋತ್ಸವ ಹಾಗೂ ಮಲಬಾರ್ ದಿನದ ಅಂಗವಾಗಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಂಗಳೂರು ಶೋರೂಂ ವತಿಯಿಂದ ನಗರದಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ರೋಗಿಗಳಿಗೆ ಹಣ್ಣು ವಿತರಿಸುವ ಮೂಲಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ನವೆಂಬರ್ 01/11/2026ರ ಭಾನುವಾರ ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ವೆನ್‌ಲಾಕ್ ಆಸ್ಪತ್ರೆ ರಸ್ತೆ,ರೈಲ್ವೆ ನಿಲ್ದಾಣ ರಸ್ತೆ ಹಾಗೂ ಮಿಲಾಗ್ರಿಸ್ ಚರ್ಚ್ ರಸ್ತೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು.ಈ ಅಭಿಯಾನದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ಸಿಬ್ಬಂದಿ ಉತ್ಸಾಹದಿಂದ ಪಾಲ್ಗೊಂಡು ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.

ಬಳಿಕ ಸಾಮಾಜಿಕ ಕಳಕಳಿಯ ಭಾಗವಾಗಿ ವೆನ್‌ಲಾಕ್ ಸರ್ಕಾರಿ ಆಸ್ಪತ್ರೆಯ 150 ರೋಗಿಗಳಿಗೆ ಹಾಗೂ ಲೇಡಿ ಗೋಷನ್ ಆಸ್ಪತ್ರೆಯ 150 ರೋಗಿಗಳಿಗೆ ಹಣ್ಣಿನ ಕಿಟ್‌ಗಳನ್ನು ವಿತರಿಸಲಾಯಿತು.

ಮಲಬಾರ್ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯು ತನ್ನ ಲಾಭಾಂಶದ ಶೇ. 5ರಷ್ಟನ್ನು ಸಮಾಜಮುಖಿ ಕಾರ್ಯಗಳಿಗೆ ಮೀಸಲಿಡುತ್ತಿದ್ದು, ವ್ಯಾಪಾರದ ಜೊತೆಗೆ ಸಾಮಾಜಿಕ ಜವಾಬ್ದಾರಿಗೂ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಂಗಳೂರು ಶೋರೂಂ ಮುಖ್ಯಸ್ಥರಾದ ಹಫೀಜ್ ರೆಹಮಾನ್ ತಿಳಿಸಿದರು.

 

ಈ ಸಂದರ್ಭದಲ್ಲಿ, ಮಾರ್ಕೆಟಿಂಗ್ ಮ್ಯಾನೇಜರ್ ಶೇಕ್ ಫರ್ಹಾನ್, ಅಸಿಸ್ಟೆಂಟ್ ಮ್ಯಾನೇಜರ್ ಗಳಾದ ಚಂದ್ರಹಾಸ್ ಪೂಜಾರಿ,ನಿತ್ಯಾನಂದ್,ಹೆಚ್.ಆರ್.ಕೋ-ಆರ್ಡಿನೇಟರ್ ಸುಧೀರ್ ಹಾಗೂ ಮಲಬಾರ್ ಗೋಲ್ಡ್ & ಡೈಮಂಡ್ಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

✍ಬರಹ ಕೃಪೆ.✍

ಸಿದ್ದಿಕ್ ಚಕ್ಕಮಕ್ಕಿ.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

About Author

More Stories

Leave a Reply

Your email address will not be published. Required fields are marked *

You may have missed