लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
11/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಮಳಲೂರು ದೇವಸ್ಥಾನ ಜೀಣೋದ್ಧಾರಕ್ಕೆ 50 ಲಕ್ಷ ಅನುದಾನ : ಶಾಸಕಿ.ನಯನಾ ಮೋಟಮ್ಮ….

1 min read

‎ಮಳಲೂರು ದೇವಸ್ಥಾನ ಜೀಣೋದ್ಧಾರಕ್ಕೆ 50 ಲಕ್ಷ ಅನುದಾನ : ಶಾಸಕಿ.ನಯನಾ ಮೋಟಮ್ಮ
‎
‎ಮೂಡಿಗೆರೆ: ಮಳಲೂರು ಗ್ರಾಮದ ಐತಿಹಾಸಿಕ ಹಾಗೂ ಪುರಾತನ ಧಾರ್ಮಿಕ ಶ್ರದ್ದಾ ಕೇಂದ್ರವಾದ ದೊಡ್ಡಮ್ಮ ಮತ್ತು ಚಿಕ್ಕಮ್ಮನವರ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ದೇವಸ್ಥಾನದ ಸಮಗ್ರ ಜೀರ್ಣೋದ್ಧಾರಕ್ಕೆ ಶಾಸಕಿ ನಯನಾ ಮೋಟಮ್ಮ ಅವರು ತಮ್ಮ ಅನುದಾನದಿಂದ 50 ಲಕ್ಷ ನೀಡುವುದಾಗಿ ಘೋಷಿಸಿದರು.
‎
‎ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಶಾಸಕಿ ನಯನಾ ಮೋಟಮ್ಮ, ಮಳಲೂರಮ್ಮ ದೇವಸ್ಥಾನವು ಈ ಭಾಗದ ಜನರ ಬದುಕು, ನಂಬಿಕೆ ಹಾಗೂ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ಪವಿತ್ರ ಕ್ಷೇತ್ರವಾಗಿದೆ. ದೇವಸ್ಥಾನಕ್ಕೆ ಈವರೆಗೆ ಸಮಗ್ರ ಜೀರ್ಣೋದ್ಧಾರ ನಡೆದಿಲ್ಲ ಎಂಬುದು ತಿಳಿದುಬಂದಿದ್ದು, ಇದೀಗ ಸಂಪೂರ್ಣವಾಗಿ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ದೇವಸ್ಥಾನ ನಿರ್ಮಾಣಕ್ಕೆ ಮುಂದಾಗಿರುವುದು ಸಂತಸದ ಸಂಗತಿ. ಇಂತಹ ಐತಿಹಾಸಿಕ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಕೈಹಾಕಲು ದೇವಿಯ ಅನುಗ್ರಹವೂ ಇರಬೇಕು ಎಂದರು.
‎
‎ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೆಗೌಡ ಮಾತನಾಡಿ, ಮಳಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಮ್ಮ ಮತ್ತು ಚಿಕ್ಕಮ್ಮನವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಊರಿನ ಹಿರಿಯರು, ಗೌಡರು ಹಾಗೂ ಭಕ್ತರು ಒಗ್ಗೂಡಿ ಮುಂದಾಗಿರುವುದು ಸಂತಸದ ಸಂಗತಿ. ಸುಮಾರು 3.5 ಕೋಟಿ ರೂ. ವೆಚ್ಚದ ಅಂದಾಜಿನಲ್ಲಿ ದೇವಸ್ಥಾನದ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ ಯಾವುದೇ ಅಡೆತಡೆಯಿಲ್ಲದೆ ಸುಸೂತ್ರವಾಗಿ ಪೂರ್ಣಗೊಳ್ಳಲಿ ಎಂದು ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದರು.
‎
ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಕೆ.ಬಿ. ಅನಂತೇಗೌಡ, ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ವಿ.ಶರಣ್ ಗೌಡ ಮಾತನಾಡಿದರು. ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಿದ ದಿವಂಗತ ವೆಂಕಟರಾಮೇಗೌಡ ಹಾಗೂ ಎಂ.ಬಿ. ರುದ್ರೇಗೌಡ ಅವರನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್ ಬೋಜೇಗೌಡ, ದೇವಸ್ಥಾನ ಸಮಿತಿ ಕಾರ್ಯದರ್ಶಿ ಕೆ.ಕೆ. ಕೃಷ್ಣಗೌಡ, ಹಿರಿಯ ಮುಖಂಡರು, ವಿವಿಧ ಗ್ರಾಮಗಳ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ಪ್ರಸನ್ನ ಸ್ವಾಗತಿಸಿ, ಕುಮಾರೇಗೌಡ ವಂದಿಸಿದರು.

About Author

Leave a Reply

Your email address will not be published. Required fields are marked *

You may have missed