लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
19/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆ ಅಟ್ಟಹಾಸ – ಆನೆ ದಾಳಿಗೆ ವ್ಯಕ್ತಿ ಬಲಿ…..

1 min read

‎ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆ ಅಟ್ಟಹಾಸ – ಆನೆ ದಾಳಿಗೆ ವ್ಯಕ್ತಿ ಬಲಿ..
‎ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಆನೆ ದಾಳಿಗೆ ವ್ಯಕ್ತಿ ಬಲಿಯಾದ ದಾರುಣ ಘಟನೆ ನಡೆದಿದೆ. ದನ ಹುಡುಕಲು ಹೋದ ವೇಳೆ ಈ ದುರಂತ ಸಂಭವಿಸಿದ್ದು, ಹಾಸನ ಜಿಲ್ಲೆಯ ಬೇಲೂರು ಬಳಿಕ ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಕಾಡಾನೆ ದಾಳಿಗೆ ಜೀವಹಾನಿಯಾಗಿದೆ.
‎ಮೃತ ದುರ್ದೈವಿಯನ್ನು ರೈತ ಕೃಷ್ಣಮೂರ್ತಿ ಎಂದು ಗುರುತಿಸಲಾಗಿದೆ. ಎನ್.ಆರ್. ಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಕೃಷ್ಣಮೂರ್ತಿ ಅವರು ತೋಟದಲ್ಲಿದ್ದಾಗ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ದಾಳಿ ನಡೆಸಿದೆ.
ಈ ಪ್ರಕರಣ ಎನ್.ಆರ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳ ಸತತ ಹಾವಳಿ ಹಾಗೂ ಪ್ರಾಣಹಾನಿಯಿಂದಾಗಿ ಈ ಭಾಗದ ರೈತರು ತೀವ್ರ ಆತಂಕಕ್ಕೀಡಾಗಿದ್ದು, ಸ್ಥಳದಲ್ಲಿ ಜನಾಕ್ರೋಶ ವ್ಯಕ್ತವಾಗಿದೆ.

About Author

Leave a Reply

Your email address will not be published. Required fields are marked *

You may have missed