लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
21/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

  • ಮಕ್ಕಳ ಪ್ರತಿಭೆ ಹೊರತರುವುದೇ ಪ್ರತಿಭಾ ಕಾರಂಜಿ ಉದ್ದೇಶ..
    ಚಿಕ್ಕಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವುದೇ ಪ್ರತಿಭಾ ಕಾರಂಜಿಯ ಮುಖ್ಯ ಉದ್ದೇಶ. ಮಕ್ಕಳು ಯಾವುದೇ ಹಿಂಜರಿಕೆ ಇಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ನಿಮ್ಮ ಪ್ರತಿಭೆ ಅನಾವರಣ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಹೊಲದಗದ್ದೆ ಗಿರೀಶ್ ತಿಳಿಸಿದರು.
    ‎ತಾಲೂಕಿನ ಮಲ್ಲಂದೂರಿನ ಚಿರಂತ್ ವಿದ್ಯಾಸಂಸ್ಥೆಯಲ್ಲಿ ಜಿಪಂ, ತಾಪಂ, ಶಾಲಾ ಶಿಕ್ಷಣ ಇಲಾಖೆ, ಬ್ಯಾರವಳ್ಳಿ ಗ್ರಾಪಂ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಜಿಲ್ಲೆಯವರೇ ಆದ ಎಚ್.ಜಿ.ಗೋವಿಂದೇಗೌಡ ಅವರು ೨೦೦೨ರಲ್ಲಿ ಶಿಕ್ಷಣ ಸಚಿವರಾದಾಗ ಪ್ರತಿಭಾ ಕಾರಂಜಿ ಆರಂಭಗೊಂಡು ಇಂದಿನವರೆಗೂ ಮುಂದುವರಿದುಕೊಂಡು ಬಂದಿದೆ ಎಂದರು.
    ‎ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಸ್ಪರ್ಧೆ ಮಾಡುವುದೇ ಮುಖ್ಯ. ಸರ್ಕಾರ ಇಂತಹ ಕಾರ್ಯಕ್ರಮಕ್ಕೆ ಪ್ರೋತ್ಸಾಹ ಧನವನ್ನು ಹೆಚ್ಚು ಹೆಚ್ಚು ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದರು.
    ‎ಗ್ರಾಪಂ ಮಾಜಿ ಅಧ್ಯಕ್ಷ ಸಿ.ಸಿ.ಪುಟ್ಟೇಗೌಡ ಮಾತನಾಡಿ, ಗ್ರಾಮೀಣ ಭಾಗದ ಶಾಲೆಗಳು ಉನ್ನತ ಸ್ಥಾನಕ್ಕೆ ಬರುವಂತಾಗಬೇಕು. ಇದಕ್ಕೆ ಸ್ಥಳೀಯರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.
    ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎನ್.ಡಿ.ಮಂಜುನಾಥ್ ಮಾತನಾಡಿ, ಮಲ್ಲಂದೂರಿನಂತಹ ಸಣ್ಣ ಊರಿನಲ್ಲಿ ೨೦ ವರ್ಷಗಳ ಹಿಂದೆ ಕಟ್ಟಿ ಬೆಳೆಸಿದ ಈ ಸಂಸ್ಥೆಗೆ ಪಾಲಕರು ತಮ್ಮ ಮಕ್ಕಳನ್ನು ಸೇರಿಸಬೇಕು. ಆಗ ಶಾಲೆ ಉನ್ನತಿಯತ್ತ ಸಾಗಲು ಸಾಧ್ಯ. ಈ ಬಗ್ಗೆ ಪ್ರತಿಯೊಬ್ಬ ಪಾಲಕರೂ ಗಮನಹರಿಸಬೇಕು ಎಂದು ಮನವಿ ಮಾಡಿದರು.
    ‎ಶಾಲೆಯ ಪ್ರಾಚಾರ್ಯ ಎಸ್.ಡಿ.ರೇವಣ್ಣ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಾದ ಸಮನ್ವಯ, ಚೈತ್ರಾ, ಗ್ರಾಪಂ ಪಿಡಿಒ ದೇವರಾಜ್, ಶಿಕ್ಷಕ ಸುಂದರೇಶ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ವಸಂತ ಸ್ವಾಗತಿಸಿದರು.
    ‎

About Author

Leave a Reply

Your email address will not be published. Required fields are marked *