लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
24/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಶಾಸಕ ಸ್ಥಾನಕ್ಕೆ ನಯನ ಮೋಟಮ್ಮ ರಾಜೀನಾಮೆ
ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು  ಮೂಡಿಗೆರೆ ಕಡೆಗೆ ಓಡಿಸುವ ಕಾರ್ಯಾಚರಣೆಯನ್ನು ನಿಲ್ಲಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾನುವಾರ ಘೋಷಿಸಿದ್ದ ಮೂಡಿಗೆರೆ ಶಾಸಕಿ ನಯನ ಮೋಟಮ್ಮ, ಸೋಮವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
‎
‎ಸೋಮವಾರ ಬೆಂಗಳೂರಿಗೆ ತೆರಳಿದ ಅವರು ವಿಧಾನಸಭೆ ಸ್ಪೀಕ‌ರ್ ಅವರನ್ನು ಭೇಟಿಯಾಗಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
‎
‎ಬೇಲೂರಿನಿಂದ ಮೂಡಿಗೆರೆ ಭಾಗಕ್ಕೆ ಕಾಡಾನೆಗಳನ್ನು ಓಡಿಸುವ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ನಯನ ಮೋಟಮ್ಮ, ಜನರ ಹಿತಾಸಕ್ತಿಯೇ ತಮಗೆ ಮುಖ್ಯ ಎಂದು ಸ್ಪಷ್ಟಪಡಿಸಿದ್ದರು.
‎
‎’ನಾನು ಸರ್ಕಾರಕ್ಕೆ ಉತ್ತರ ಕೊಡುವ ಅಗತ್ಯವಿಲ್ಲ. ಮೊದಲು ಜನರಿಗೆ ಉತ್ತರ ಕೊಡಬೇಕಿದೆ. ಜನ ನಮ್ಮನ್ನು ಗೆಲ್ಲಿಸಿದ್ದರಿಂದಲೇ ಸರ್ಕಾರ ಅಧಿಕಾರಕ್ಕೆ ಬಂದಿದೆ’ ಎಂದು ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದರು.
‎
ಭಾನುವಾರ ರಾತ್ರಿ ಕಾಡಾನೆಗಳನ್ನು ವಾಪಸ್ ಓಡಿಸದಿದ್ದರೆ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದರು. “ಆದರೆ, ಆನೆಗಳ ಸ್ಥಳಾಂತರ ಕಾರ್ಯಾಚರಣೆ ಮುಂದುವರಿದ ಹಿನ್ನೆಲೆಯಲ್ಲಿ ತಮ್ಮ ಮಾತಿನಂತೆ ಸೋಮವಾರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed