day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಕೋರಮಂಗಲ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಟೀ, ಪಕೋಡ ಮಾರಿ ಬಿಬಿಎಂಪಿಗೆ ದೇಣಿಗೆ #avintvcom – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

ಕೋರಮಂಗಲ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಟೀ, ಪಕೋಡ ಮಾರಿ ಬಿಬಿಎಂಪಿಗೆ ದೇಣಿಗೆ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಕೋರಮಂಗಲ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಟೀ, ಪಕೋಡ ಮಾರಿ ಬಿಬಿಎಂಪಿಗೆ ದೇಣಿಗೆ: ಆಮ್ ಆದ್ಮಿ ಪಕ್ಷದಿಂದ ವಿನೂತನ ಪ್ರತಿಭಟನೆ

ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು

ಬೆಂಗಳೂರು ಡಿಸೆಂಬರ್‌ 18: ಟೀ, ಪಕೋಡ ಹಾಗೂ ಟಿಕೆಟ್ ಮಾರುವುದರ ಮೂಲಕ ಕೋರಮಂಗಲ ಮೇಲ್ಸೇತುವೆ ಕಾಮಗಾರಿ ಶೀಘ್ರ ಮುಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಕೋರಮಂಗಲ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘದ ಸದಸ್ಯರು, ನಿವಾಸಿಗಳು ಹಾಗೂ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಇಂದು ವಿನೂತನವಾಗಿ ಪ್ರತಿಭಟನೆಯನ್ನು ನಡೆಸಿದರು. ಅನಗತ್ಯ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಸೋನಿ ವರ್ಲ್ಡ್ ವೃತ್ತದ ಬಳಿ ಶುಕ್ರವಾರ ವಿನೂತನವಾಗಿ ಪ್ರತಿಭಟನೆ ನಡೆಸಿದ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.

ನಗರದ ಅತಿ ದೊಡ್ಡ ಎರಡನೇ ಮೇಲ್ಸೇತುವೆ ಎಂದು ಮಂಕುಬೂದಿ ಎರಚಿ ಪ್ರಾರಂಭಿಸಿದ ಕೋರಂಮಗಲ ಎಲಿವೇಟೆಡ್ ಮೇಲ್ಸೇತುವೆ ಕಾಮಗಾರಿ 4 ವರ್ಷ ಕಳೆದರೂ ಮುಗಿಯುವ ಲಕ್ಷಣ ಕಾಣುತ್ತಿಲ್ಲ, ಆದ ಕಾರಣ ಇದನ್ನು ಬೃಹತ್ ಬೆಂಗಳೂರಿನ ಬೃಹತ್ ಭ್ರಷ್ಟಾಚಾರದ ಸ್ಮಾರಕವಾಗಿ ಘೋಷಿಸಲಾಗುತ್ತಿದೆ ಎಂದು ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದರು. ಶುಕ್ರವಾರ ನಡೆದ ಕೋರಮಂಗಲ ಮೇಲ್ಸೇತುವೆ ಕಾಮಗಾರಿ ಶೀಘ್ರ ಮುಗಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಕೋರಮಂಗಲ 100 ಅಡಿ ಮುಖ್ಯರಸ್ತೆಯಿಂದ ಈಜೀಪುರ ಮುಖ್ಯರಸ್ತೆ – ಒಳವರ್ತುಲ ರಸ್ತೆ ಜಂಕ್ಷನಿಂದ ಕೇಂದ್ರಿಯ ಸದನ ಜಂಕ್ಷನ್ ತನಕ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದ್ದು 2.4 ಕಿಮೀ ಉದ್ದವಿದೆ. ನಗರೋಥ್ಥಾನ ಯೋಜನೆ ಅಡಿ 203.20 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಈ ಮೇಲ್ಸೇತುವೆ ಕಾಮಗಾರಿಯನ್ನು 2017 ಜುಲೈ ಉದ್ಘಾಟಿಸಲಾಯಿತು. 2019 ಕ್ಕೆ ಮುಗಿಯಬೇಕಾದ ಕಾಮಗಾರಿ ಇನ್ನೂ ಮುಗಿದಿಲ್ಲ. 203 ಕೋಟಿಯಲ್ಲಿ ಎಷ್ಟು ಖರ್ಚಾಗಿದೆ ಎಂಬುದು ಯಾರ ಬಳಿಯೂ ಮಾಹಿತಿ ಇಲ್ಲ, ಬೇಕಾದಾಗ ಬಂದು ಏನು ಬೇಕಾದರೂ ತಿಂದು ಹೋಗಲು ಇದು ಮಾವನ ಮನೆಯೇ ಎಂದು ಪ್ರಶ್ನಿಸಿದರು.

ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಬೃಹತ್ ಭ್ರಷ್ಟಾಚಾರದ ಸ್ಮಾರಕಗಳ ಬಳಿ ಟೀ ಅಂಗಡಿ, ಪಕೋಡ ಹಾಗೂ ಸ್ಮಾರಕ ವೀಕ್ಷಿಸಲು ಟಿಕೆಟ್ ಮಾರಾಟ ಮಾಡಿ ಆ ಹಣವನ್ನು ಕಾಮಗಾರಿ ನಿಧಿಗೆ ಕೊಡಲಾಗುವುದು ಎಂದರು. ಕೋರಮಂಗಲದ ನಿವಾಸಿಗಳು ದಿನನಿತ್ಯ ಸಂಚಾರ ದಟ್ಟಣೆಯಿಂದ ನರಕ ಅನುಭವಿಸುತ್ತಿದ್ದಾರೆ. ಸ್ಥಳೀಯ ಶಾಸಕ ರಾಮಲಿಂಗಾರೆಡ್ಡಿ ಮಾಧ್ಯಮಗಳ ಮುಂದೆ ಆಗಾಗ ಕಾಣಿಸಿಕೊಂಡು ಬಾಯಿ ಚಪಲದ ಮಾತುಗಳನ್ನಾಡುತ್ತಿದ್ದಾರೆ ಹೊರತು ಕಾಮಗಾರಿ ಮುಗಿಸಲು ಒತ್ತಡ ಹಾಕುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಮಾಧ್ಯಮ‌ ಸಂಚಾಲಕ ಜಗದೀಶ್ ಸದಂ, ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್, ಕೋರಮಂಗಲ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು, ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author