ಎಲ್.ಕೆ.ಅತೀಕ್ಶಾಲೆಗಳಿಗೆ ನೀರಿನ ಸೌಕರ್ಯ ಕಲ್ಪಿಸಲು ಗಡುವು; ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಸಲಹೆ #avintvcom
1 min read
ಜಿಲ್ಲಾ ಪ್ರಗತಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್
ಶಾಲೆಗಳಿಗೆ ನೀರಿನ ಸೌಕರ್ಯ ಕಲ್ಪಿಸಲು ಗಡುವು; ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಸಲಹೆ
ಬೆಳಗಾವಿ, ಜ.7(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಪ್ರವಾಹ ಸಂದರ್ಭದಲ್ಲಿ ಹಾನಿಗಿಡಾಗಿರುವ ಶಾಲಾ ಕಟ್ಟಡಗಳು, ಅಂಗನವಾಡಿ ಕೇಂದ್ರಗಳು, ಕುಡಿಯುವ ನೀರಿನ ವ್ಯವಸ್ಥೆ, ರಸ್ತೆ, ಸೇತುವೆ ಮತ್ತಿತರ ಮೂಲಸೌಕರ್ಯಗಳನ್ನು ತಕ್ಷಣವೇ ಸರಿಪಡಿಸಬೇಕು. ಅದೇ ರೀತಿ ಎಲ್ಲ ಶಾಲೆ-ಅಂಗನವಾಡಿ ಕೇಂದ್ರಗಳಿಗೆ ಜನವರಿ ಮಾಸಾಂತ್ಯದೊಳಗೆ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ( ಜ.7) ನಡೆದ ಜಿಲ್ಲಾ ಪ್ರಗತಿ ಪರಿಶೀನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲ ಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದಕ್ಕೆ ಸಂಬಂಧಿಸಿದ ಎಲ್ಲ ಕಾಮಗಾರಿಗಳನ್ನು ಕಡ್ಡಾಯವಾಗಿ ಜನವರಿ ಮಾಸಾಂತ್ಯದಲ್ಲಿ ಪೂರ್ಣಗೊಳಿಸಬೇಕು ಎಂದು ಅತೀಕ್ ತಿಳಿಸಿದರು.