AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕೋಳಿ ಶೀತ ಜ್ವರ, ಹಕ್ಕಿಜ್ವರ ಮುಂಜಾಗ್ರತಾ ಕ್ರಮವಹಿಸಿ : ವಿಕಾಸ್ ಕಿಶೋರ್ ಸುರಳ್ಕರ್ #avintvcom

1 min read
Featured Video Play Icon

ಕೋಳಿ ಶೀತ ಜ್ವರ, ಹಕ್ಕಿಜ್ವರ ಮುಂಜಾಗ್ರತಾ ಕ್ರಮವಹಿಸಿ : ವಿಕಾಸ್ ಕಿಶೋರ್ ಸುರಳ್ಕರ್

************

ಕೊಪ್ಪಳ ಜ.07 (ಕರ್ನಾಟಕ ವಾರ್ತೆ): ಕೇರಳ, ಹಿಮಾಚಲ ಪ್ರದೇಶದಲ್ಲಿ ಕೋಳಿ ಶೀತ ಜ್ವರದ ರೋಗೋದ್ರೇಕವಾಗಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತೆ ಕ್ರಮವನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸಾರ್ವಜನಿಕರು ಮತ್ತು ಕೋಳಿ ಸಾಕಾಣಿಕೆದಾರರಿಗೆ ಸೂಚಿಸಿದ್ದಾರೆ.

ಹಕ್ಕಿಜ್ವರವು ಸಾಂಕ್ರಾಮಿಕ ರೋಗವಾಗಿದ್ದು, ಎವಿಯನ್ ಇನ್-ಫ್ಲೂ-ಎಂಜಾ ಎಂಬ ವೈರಾಣುವಿನಿಂದ ಬರುತ್ತದೆ. ಕೋಳಿ ಶೀತ ಜ್ವರವು ನಾಟಿಕೋಳಿ, ಟರ್ಕಿ ಕೋಳಿ, ಕೌಜುಗನ ಹಕ್ಕಿ, ನವಿಲಹಕ್ಕಿ, ಬಾತುಕೋಳಿ, ಹಂಸಪಕ್ಷಿ, ಬಾತುಕೋಳಿ ಮುಂತಾದ ಕೋಳಿ ವಿವಿಧ ಪ್ರಬೇದಗಳಲ್ಲಿ ಅಷ್ಟೇ ಅಲ್ಲದೇ ಮನುಷ್ಯನೊಳಗೊಂಡAತೆ ಎಲ್ಲಾ ಬಿಸಿರಕ್ತ ಪ್ರಾಣಿಗಳಲ್ಲಿ ಕಂಡು ಬರುತ್ತದೆ.

ಕೋಳಿ ಅಥವಾ ಪಕ್ಷಿಗಳಲ್ಲಿ ಹಠಾತ್ ಸಾವು, ಅಸಾದರಣ ಸಾವು, ಮೂಗು, ಬಾಯಿ ಮತ್ತು ಕಣ್ಣಿನಿಂದ ನೀರು ಸುರಿಯುವುದು, ಕೋಳಿಗಳ ಮೊಣಕಾಲು ಮತ್ತು ಪಾದಗಳು ನೀಲಿ ಬಣ್ಣಕ್ಕೆ ತಿರುಗುವುದು ಈ ರೋಗದ ಲಕ್ಷಣಗಳಾಗಿವೆ. ಮತ್ತು ಸರಿಯಾಗಿ ಬೇಯಿಸಿದ ಕೋಳಿ ಮಾಂಸ ಮತ್ತು ಮೊಟ್ಟೆಗಳ ಸೇವನೆಯಿಂದ, ಸೂಕ್ತ ಆರೋಗ್ಯ ಕವಚವನ್ನು ಧರಿಸದೇ ರೋಗ ಪೀಡಿತ ಕೋಳಿ ಮತ್ತು ಕಲುಷಿತ ಸಲಕರಣೆಗಳ ಸಂಪರ್ಕದಿAದ ಈ ರೋಗ ಹರಡುವ ಸಾಧ್ಯತೆಯಿರುತ್ತದೆ.

ಕೋಳಿ ಸಾಕಾಣಿಕೆದಾರರು, ಜಿಲ್ಲೆಯಿಂದ ಹೊರಗೆ ಹಾಗೂ ಹೊರಗಿನಿಂದ ಪ್ರವೇಶಿಸುವ ಸೋಂಕಿತ ಕೋಳಿ, ಉತ್ಪನ್ನಗಳು, ಕೋಳಿ ಆಹಾರ, ಸಂಬAಧಿತ ಪರಿಕರಗಳು ಹಾಗೂ ಸಾಗಾನಿಕೆ ವಾಹನಗಳನ್ನು ಸೋಂಕು ನಿವಾರಿಕಗಳಿಂದ ಸಿಂಪಡಿಸಿದ ನಂತರವೇ ಚಲನ-ವಲನಕ್ಕೆ ಕ್ರಮ ವಹಿಸಬೇಕು. ತಮ್ಮ ಪ್ರದೇಶವನ್ನು ಶುಚಿಯಾಗಿಟ್ಟುಕೊಂಡು, ನಿಯಮಿತವಾಗಿ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಬೇಕು. ವಲಸೆ ಬರುವ ಅಥವಾ ಅಲ್ಲೇ ವಾಸಿಸುವ ಹಕ್ಕಿ ಪಕ್ಷಿಗಳು ಪ್ರವೇಶಿಸದಂತೆ ಆಹಾರ, ಕುಡಿಯುವ ನೀರಿನ ಸಂಪರ್ಕಕ್ಕೆ ಬರದಂತೆ ಕ್ರಮವಹಿಸಬೇಕು. ಅಸಹಜ ಸಾವು ಸಂಭವಿಸಿದ್ದಲ್ಲಿ ತಕ್ಷಣವೇ ಫಾರಂ ವ್ಯಾಪ್ತಿಗೊಳಪಡುವ ಅಥವಾ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯ ಅಧಿಕಾರಿ ಅಥವಾ ಸಿಬ್ಬಂದಿಯವರಿಗೆ ಮಾಹಿತಿ ನೀಡಬೇಕು.

ಅವಶ್ಯಕತೆಯಿದ್ದಲ್ಲಿ, ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಾದ ಕೊಪ್ಪಳ ಮೊ.ಸಂ. 9902135800, ಗಂಗಾವತಿ ಮೊ.ಸಂ. 9972709497, ಕುಷ್ಟಗಿ ಮೊ.ಸಂ. 8123972794 ಹಾಗೂ ಯಲಬುರ್ಗಾ ಮೊ.ಸಂ. 9620022851, ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author