AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿ #avintvcom

1 min read
Featured Video Play Icon

15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಗುತ್ತಿಗೆದಾರರ ಸಂಘದ ಎಚ್ಚರಿಕೆ

ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿ

ಬೆಂಗಳೂರು ಜನವರಿ 20: ಕೋವಿಡ್‌ – 19 ಸಂಕಷ್ಟ ರಾಜ್ಯದಲ್ಲಿ ಆವರಿಸಿದ ನಂತರ ರಾಜ್ಯ ಸರಕಾರವು ನಮ್ಮೆಲ್ಲಾ ವಹಿವಾಟುಗಳಿಗೆ ತಾತ್ಕಾಲಿಕವಾಗಿ ಕೆಲವು ತಿಂಗಳುಗಳಿಂದ ಹಲವಾರು ನಿರ್ಬಂಧಗಳನ್ನು ಹೇರಿದೆ. ಇದರ ಪರಿಣಾಮ ರಾಜ್ಯದ ಒಂದು ಲಕ್ಷಕ್ಕೂ ಅಧಿಕ ನೋಂದಾಯಿತ ಗುತ್ತಿಗೆದಾರರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಅದರಲ್ಲೂ ಮುಖ್ಯವಾಗಿ ವಿವಿದ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಬಿಲ್ಲುಗಳಿಗೆ ಹಣ ಬಿಡುಗಡೆ ಮಾಡುವುದು ಹಾಗೂ ಪ್ಯಾಕೇಜ್‌ ಪದ್ದತಿಯ ಅಡಿಯಲ್ಲಿ ಟೆಂಡರ್‌ ಕರೆಯುವುದನ್ನು ರದ್ದುಪಡಿಸುವಂತೆ ಹಲವಾರು ಬಾರಿ ಮಾನ್ಯ ಮುಖ್ಯಮಂತ್ರಿಗಲ್ಲಿ, ಮಾನ್ಯ ಸಚಿವರುಗಳಲ್ಲಿ ಹಾಗೂ ಉನ್ನತ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರೂ ಉಪಯೋಗವಾಗಿಲ್ಲ. ನಮ್ಮ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸದೇ ಇದ್ದಲ್ಲಿ ರಾಜ್ಯದ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೆ ಈಡಾಗಲಿದ್ದು, ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳಿ ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಇಂದು ಗುತ್ತಿಗೆದಾರರ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಗುತ್ತಿಗೆದಾರರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಬಗ್ಗೆ ವಿವರಣೆ ನೀಡಿದರು.

ಪ್ರಮುಖ ಬೇಡಿಕೆಗಳು :-

ಟೆಂಡರ್‌ನಲ್ಲಿ ಭಾಗವಹಿಸದಂತೆ ನಿರ್ಬಂಧಿಸುತ್ತಿರುವ ಕುರಿತು:

ರಾಜಕೀಯ ಪ್ರಭಾವವನ್ನು ಬಳಸಿಕೊಂಡು ಕೆಲವು ಅಧಿಕಾರಿಗಳು ಗುತ್ತಿಗೆದಾರರಿಗೆ ಸರಕಾರಿ ಟೆಂಡರ್‌ಗಳಲ್ಲಿ ಭಾಗವಹಿಸದಂಥೆ ನಿರ್ಬಂಧವನ್ನು ಹೇರುತ್ತಿದ್ದಾರೆ. ಇದರ ಹೊರತಾಗಿ ಗುತ್ತಿಗೆದಾರರು ಟೆಂಡರ್‌ನಲ್ಲಿ ಭಾಗವಹಿಸಿ ಬಿಡ್‌ ಸಲ್ಲಿಸಿದ ನಂತರವೂ ಟೆಂಡರನ್ನು ಹಿಂಪಡೆಯುವಂತೆ ಒತ್ತಡ ತಂತ್ರವನ್ನು ಅನುಸರಿಸುತ್ತಿದ್ದಾರೆ. ಇದರಿಂದ ಟೆಂಡರ್‌ನಲ್ಲಿ ಸ್ಪರ್ಧಾತ್ಮಕ ದರಗಳಿಂದ ವಂಚಿತವಾಗಿ ಹೆಚ್ಚಿನ ಪಾರದರ್ಶಕತೆಗೆ ಅವಕಾಶವಿಲ್ಲದೆ ರಾಜ್ಯದ ತೆರಿಗೆದಾರರ ಹಣ ವ್ಯರ್ಥವಾಗುತ್ತಿದ್ದು ಗುತ್ತಿಗೆದಾರರ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದರು.

ಉಪಾಧ್ಯಕ್ಷರಾದ ಅಂಬಿಕಾಪತಿ, ದಿನೇಶ್‌, ಖಚಾಂಚಿ ನಟರಾಜ್, ಜಂಟಿ ಕಾರ್ಯದರ್ಶಿ ರಮೇಶ್‌‌ ಅವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author