ಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಶಿವ ದೇವಾಲಯ ಹಾಗೂ ಸಿದ್ದಾರೂಢ ಮಠದಲ್ಲಿ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.
1 min readಹುಬ್ಬಳ್ಳಿ- ವಾಣಿಜ್ಯ ನಗರು ಹುಬ್ಬಳ್ಳಿಯಲ್ಲಿ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ.ನಗರದ ಶಿವ ದೇವಾಲಯ ಹಾಗೂ ಸಿದ್ದಾರೂಢ ಮಠದಲ್ಲಿ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.
ನಗರದ ರೈಲ್ವೆ ಸ್ಟೇಷನ್ ಬಳಿಯಲ್ಲಿರುವ ಶಿವನ ಮಂದಿರಕ್ಕೆ ಬೆಳಿಗ್ಗೆಯಿಂದಲೆ ಭಕ್ತರು ಆಗಮಿಸಿಶಿವನ ಮೂರ್ತಿಗೆ ಅಭಿಷೇಕ ಮಾಡುವ ಮೂಲಕ ಶಿವರಾತ್ರಿ ಆಚರಣೆ ಮಾಡುತ್ತಿದ್ದಾರೆ. ಇನ್ನು ಸಿದ್ದಾರೂಢ ಮಠದಲ್ಲಿಯೂ ಶಿವರಾತ್ರಿ ಸಂಭ್ರಮ ಕಳೆಗಟ್ಟಿದೆ.
ಸಿದ್ದಾರೂಢ ಮಠಕ್ಕೆ ಆಗಮಿಸುವ ಭಕ್ತರು ಶ್ರೀ ಸಿದ್ಧಾರೂಢ ಮತ್ತು ಗುರುನಾಥಾರೂಢರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುವ ದೃಶ್ಯ ಸಾಮಾನ್ಯವಾಗಿದೆ.
ಹುಬ್ಬಳ್ಳಿ ಮಾತ್ರವಲ್ಲದೇ ಅಕ್ಕ ಪಕ್ಕದ ಜಿಲ್ಲೆಗಳಿಂದಲೂ ಜನತು ಆಗಮಿಸಿ ಶ್ರೀ ಸಿದ್ಧಾರೂಢ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಬೆಳಗ್ಗೆ 4 ಗಂಟೆಯಿಂದಲೇ ಕಾಕಡಾರತಿ, ರುದ್ರಾಭಿಷೇಕ ಸೇರಿದಂತೆ ಪೂಜೆ ಪುರಸ್ಕಾರಗಳು ನಡೆಯುತ್ತಿವೆ. ಭಕ್ತರು ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ.