लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
21/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಪೋಷಣ್ ಅಭಿಯಾನ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಕುರಿತಾಗಿ ಗೂಗಲ್ ಮೀಟ್ ಮೂಲಕ ಸಭೆ ನಡೆಸಿದರು.#avintvcom

1 min read
Featured Video Play Icon

ಇಂದು ಬೆಂಗಳೂರಿನಲ್ಲಿ, ಪೋಷಣ್ ಅಭಿಯಾನ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಕುರಿತಾಗಿ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಉಪನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೊಂದಿಗೆ *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ,* ಯವರು ಗೂಗಲ್ ಮೀಟ್ ಮೂಲಕ ಸಭೆ ನಡೆಸಿ, ಸಮಾಲೋಚನೆ ನಡೆಸಿದರು. ಇದೇ ವೇಳೆ ಪ್ರತಿ ಜಿಲ್ಲೆಯಲ್ಲಿ ಯೋಜನೆಯ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ಪಡೆದು, ಪರಿಶೀಲಿಸಿದರು. ಪೋಷಣ್ ಅಭಿಯಾನ ಯೋಜನೆ ಅನುಷ್ಠಾನದಲ್ಲಿ ದೇಶದಲ್ಲಿ 31ನೇ ಸ್ಥಾನದಲ್ಲಿದ್ದ ನಮ್ಮ ರಾಜ್ಯ, ಪ್ರಸ್ತುತ 2ನೇ ಸ್ಥಾನ ಪಡೆದುಕೊಂಡಿಕೊಂಡಿರುವುದು ಸಂತಸದ ಸಂಗತಿ. ಈ ನಿಟ್ಟಿನಲ್ಲಿ ಮುಂದಿನ ದಿನಮಾನಗಳಲ್ಲಿ ಈ ಯೋಜನೆಯನ್ನು ಇನ್ನಷ್ಟು ಸಮರ್ಪಕವಾಗಿ ಕಾರ್ಯಗತಗೊಳಿಸಿ, ಮೊದಲ ಸ್ಥಾನ ಪಡೆಯುವ ಗುರಿಯತ್ತ, ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಯುಕ್ತರಾದ ಶ್ರೀ ಪೆದ್ದಪ್ಪಯ್ಯ, ಜಂಟಿ ನಿರ್ದೇಶಕರಾದ ಡಾ. ಉಷಾ ಹಾಗೂ ವಿವಿಧ ಜಿಲ್ಲೆಯ ಉಪನಿರ್ದೇಶಕರು ಹಾಜರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author