AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

….,ನಿಧನ ವಾರ್ತೆ….ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ#avintvcom

1 min read
Featured Video Play Icon

……,ನಿಧನ ವಾರ್ತೆ….

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ವ್ಯಕ್ತಿಯೋರ್ವರು ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆಗೊಂಡಿರುವ ಘಟನೆ ಚಿಕ್ಕಮಗಳೂರು.ಜಿಲ್ಲೆ.
ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಗಬ್‍ಗಲ್‍ನಲ್ಲಿ ನಡೆದಿದೆ.
ಗಬ್‍ಗಲ್ ಗ್ರಾಮದ ತಿಮ್ಮಪ್ಪ ಪೂಜಾರಿ(60) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ತಿಮ್ಮಪ್ಪ ಅವರು ಕೂಲಿ ಕೆಲಸ ಮಾಡಿಕೊಂಡು ಪುತ್ರ ಮಹೇಶ್‍ನೊಂದಿಗೆ ವಾಸವಾಗಿದ್ದರು. ಮೃತರಿಗೆ ಇತ್ತೀಚೆಗೆ ಹೃದಯ ಶಸ್ತ್ರ ಚಿಕಿತ್ಸೆಯಾಗಿದ್ದು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ನೋವು ತಾಳಲಾರದೇ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪುತ್ರ ಉಮೇಶ್ ಬಾಳೂರು ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಬಾಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

http://nisargacare.com/navachaithanya-old-age-home/

Career | job

About Author