AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಎರಡು ಅಂಬುಲೆನ್ಸ್ಗಳನ್ನು ನೀಡಿದ್ದಾರೆ#avintvcom

1 min read

ಬೆಳಗಾವಿ:
ವಿಶ್ವವನ್ನೇ ತಲ್ಲಣ ಮೂಡಿಸಿರುವ ಕೊರೋನಾ ಸೋಂಕಿನಿಂದ ಸಾವು ನೋವುಗಳು ಹೆಚ್ಚಾಗುತ್ತಿವೆ. ಆರ್ಥಿಕ ಪರಿಸ್ಥಿತಿಯೂ ಕುಸಿದಿದೆ. ಇಂಥ ಸಂದರ್ಭದಲ್ಲಿ ಸದಾ ಸಮಾಜ ಮುಖಿ ಕೆಲಸ ಮಾಡಿಕೊಂಡು ಬರುತ್ತಿರುವ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಬೆಳಗಾವಿ ಜಿಲ್ಲೆಗೆ ಎರಡು ಅಂಬುಲೆನ್ಸ್ಗಳನ್ನು ನೀಡಿದ್ದಾರೆ. ಅವುಗಳನ್ನು ಉಪಯೋಗ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಹುಕ್ಕೇರಿ ಹಿರೇಮಠದ ಪ್ರತಿಷ್ಠಾನದಿಂದ ಜಿಲ್ಲಾಡಳಿತಕ್ಕೆ ನೀಡಲಾದ ಅಂಬುಲೆನ್ಸ್ಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು. ಕೊರೋನಾ ಸಂಸದರ್ಭದಲ್ಲಿ ಜನರ ಸಂಕಷ್ಟಕ್ಕೆ ಸಹಾಯ, ಜನರ ಜೀವ ಉಳಿಸಲು ಶ್ರೀಮಠದಿಂದ ನೀಡಿರುವ ಎರಡೂ ಅಂಬುಲೆನ್ಸ್ಗಳನ್ನು ಕರ್ನಾಟಕ ಸರಕಾರದಿಂದ ಸ್ವೀಕಾರ ಮಾಡಿ ಅದನ್ನು ಜಿಲ್ಲಾಧಿಕಾರಿಗಳಿಗೆ ವಹಿಸಿದ್ದೇನೆ. ಸಂಕಷ್ಟದಲ್ಲಿರುವ ಜನರನ್ನು ಆಸ್ಪತ್ರೆಗೆ ಕರೆ ತರಲು, ಕಳುಹಿಸಲು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದ್ದೇನೆ ಎಂದರು.

http://nisargacare.com/career/

Navachaitanya Old Age Home

About Author