ತೆರೆದ ಬಾವಿಗೆ ಬಿದ್ದು ವ್ಯಕ್ತಿ ಸಾವು
1 min read
ತೆರೆದ ಬಾವಿಗೆ ಬಿದ್ದು ವ್ಯಕ್ತಿ ಸಾವು
ಕೊಟ್ಟಿಗೆಹಾರ:ತೆರೆದ ಬಾವಿಗೆ ವ್ಯಕ್ತಿಯೋರ್ವರು ಬಿದ್ದು ಮೃತಪಟ್ಟ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ಬೆಟ್ಟಗೆರೆ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಬೆಟ್ಟಗೆರೆ ಗ್ರಾಮದ ರಘು(೫೩) ಮೃತಪಟ್ಟ ದುರ್ದೈವಿ.
ರಘು ಅವರು ಭಾನುವಾರದಿಂದ ನಾಪತ್ತೆಯಾಗಿದ್ದು ಸಂಬಂಧಿಕರು ಹುಡುಕಾಟ ನಡೆಸಿದಾಗ ಸೋಮವಾರ ಬೆಟ್ಟಗೆರೆಯ ತೆರೆದ ಬಾವಿಯಲ್ಲಿ ರಘು ಅವರ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಬಣಕಲ್ ಪೋಲಿಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಬಾವಿಯಿಂದ ಹೊರ ತಗೆದು ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸೋಮವಾರ ಸಂಜೆ ಸಂಬಂಧಿಕರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಬಣಕಲ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಈ ಸಂದರ್ಭದಲ್ಲಿ ಬಣಕಲ್ ಠಾಣೆ ಪಿಎಸ್ಐ ಸತೀಶ್, ಎಎಸ್ಐ ಶಶಿ, ಸಿಬ್ಬಂದಿ ಮಹಾಂತೇಶ್, ಸಾಮಾಜಿಕ ಕಾರ್ಯಕರ್ತ ಆರೀಪ್ ಮುಂತಾದವರು ಇದ್ದರು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.