“ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಪೂರಿತ ಹೇಳಿಕೆ ಆರೋಪ : ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೂಡಿಗೆರೆ ಠಾಣೆಯಲ್ಲಿ ಎಸ್.ಡಿ.ಪಿ.ಐ ದೂರು ಸಲ್ಲಿಕೆ.”
1 min read
ಮೂಡಿಗೆರೆ:ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿದ್ದ ಹೋರಾಟದ ಕುರಿತು ಬಿಜೆಪಿ ನಾಯಕ ಸಿ.ಟಿ.ರವಿ ಅವರು ನೀಡಿರುವ ಹೇಳಿಕೆ ಮುಸ್ಲಿಂ ಸಮುದಾಯ ಹಾಗೂ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡ ದ್ವೇಷಪೂರಿತ ಮತ್ತು ಬೇಜವಾಬ್ದಾರಿಯುತವಾಗಿದೆ ಎಂದು ಆರೋಪಿಸಿ, ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ವತಿಯಿಂದ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಡಿಪಿಐ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶರೀಫ್ ಅವರು, ವಿದ್ಯಾರ್ಥಿಗಳ ನ್ಯಾಯಯುತ ಹೋರಾಟವನ್ನು ಒಂದು ನಿರ್ದಿಷ್ಟ ಸಮುದಾಯದೊಂದಿಗೆ ಸಂಪರ್ಕ ಕಲ್ಪಿಸುವ ಮೂಲಕ ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಹದಗೆಡಿಸುವ ಉದ್ದೇಶದಿಂದ ಸಿ.ಟಿ.ರವಿ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.
ಸಂವಿಧಾನ ಮತ್ತು ಕಾನೂನಿನ ಚೌಕಟ್ಟನ್ನು ಮೀರಿ ಸಮಾಜದಲ್ಲಿ ದ್ವೇಷ ಬಿತ್ತುವ ಪ್ರಯತ್ನ ನಡೆಸಿರುವ ಸಿ.ಟಿ. ರವಿ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ದೂರು ಸಲ್ಲಿಸುವ ಸಂದರ್ಭದಲ್ಲಿ ಎಸ್‌ಡಿಪಿಐ ಕ್ಷೇತ್ರ ಸಮಿತಿಯ ಸದಸ್ಯರಾದ ಬಿ.ಕೆ.ಹನೀಫ್,ರಫೀಕ್, ಅಂಜುಮನ್,ಶಬ್ಬೀರ್ ಹುಸೇನ್ ಹಾಗೂ ಸರ್ಫಾಝ್ ಉಪಸ್ಥಿತರಿದ್ದರು.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

