ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ….!!!
1 min read
ವಾರದ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ. ಚಿಕ್ಕಮಗಳೂರು ಜಿಲ್ಲೆ.ಮೂಡಿಗೆರೆ ತಾಲ್ಲೂಕಿನ ಮಾಕೋನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ನಂದೀಪುರದಲ್ಲಿ ನಡೆದಿದೆ.
ರವಿ ಎಂಬ ಹೆಸರಿನ ಸುಮಾರು 36 ವರ್ಷದ ಯುವಕ ವಾರದ ಹಿಂದೆ ನಾಪತ್ತೆಯಾಗಿದ್ದು, ನಂದೀಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ತೋಟದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದೇಹ ಕೊಳೆತ ಸ್ಥಿತಿಯಲ್ಲಿದ್ದು ಕಾರಣವೇನೆಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಧಾವಿಸಿದ ಮೂಡಿಗೆರೆ ಪೋಲೀಸ್ ಸ್ಥಳ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.

