लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
16/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಉತ್ತಮ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರನ್ನು ಗೆಲ್ಲಿಸಿ : ಕೆ.ಸಿ.ರತನ್.”

1 min read

ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಗ್ಗೆ ಜನರಲ್ಲಿ ಒಲವಿದೆ ಜೊತೆಗೆ ಒತ್ತುವರಿ ಸಮಸ್ಯೆಗೆ ಪರಿಹಾರ ಎಂಬಂತೆ ಪ.ಜಾ. ಮತ್ತು ಪ.ಪಂ. ವರ್ಗದ ಜನರಿಗೆ 25 ವರ್ಷಕ್ಕೆ ರಿಯಾಯಿತಿ ದರದಲ್ಲಿ ಲೀಜಿಗೆ ನೀಡುವಂತೆ ಬಿಜೆಪಿ ಸರ್ಕಾರದ ಕಂದಾಯ ಸಚಿವರಾಗಿದ್ದ ಆರ್.ಅಶೋಕ್ ಅವರು ಮಾಡಿದ್ದಾರೆ.
ಎನ್.ಡಿ.ಆರ್.ಎಫ್.ಫಂಡ್ ಇಂದ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಿ ರೈತರಿಗೆ ತಲುಪಿಸಿದ ಕೀರ್ತಿ ಬಿಜೆಪಿ ಸರ್ಕಾರಕ್ಕೆ ಇದೆ ಎಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರಮುಖ್ ಆದ ಕೆ.ಸಿ.ರತನ್ ನಮ್ಮ ವಾಹಿನಿಯೊಂದಿಗೆ ಮಾತನಾಡಿದರು.
2023ರ ವಿಧಾನಸಭಾ ಚುನಾವಣೆಗೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದಿಂದ ದೀಪಕ್ ದೊಡ್ಡಯ್ಯ ಎಂಬ ಉತ್ತಮ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್ ಆಯ್ಕೆಮಾಡಿದೆ ಜೊತೆಗೆ ಇವರು ಬಡಜನರ ದೀನ ದಲಿತರ ಕಷ್ಟಕ್ಕೆ ಸ್ಪಂದಿಸುವ ಗುಣ ಹೊಂದಿರುವ ವ್ಯಕ್ತಿ ಆದ್ದರಿಂದ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮತದಾರ ಬಂಧುಗಳು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವ ಮೂಲಕ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಬಜರಂಗದಳವನ್ನು ನಿಷೇಧಿಸುತ್ತೇವೆ ಎಂಬ ಕಾಂಗ್ರೆಸ್ ಪಕ್ಷದ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಖಂಡನೀಯ,ಬಜರಂಗದಳ,ವಿಶ್ವ ಹಿಂದೂ ಪರಿಷತ್,ಆರ್.ಎಸ್.ಎಸ್.ಇವುಗಳು ರಾಷ್ಟ್ರೀಯವಾದದ ಮೂಲಕ ಭಯೋತ್ಪಾದಕರ ವಿರುದ್ಧ ಧ್ವನಿ ಎತ್ತುತ್ತದೆ ಹೊರತು ಯಾವುದೇ ಕಾರಣಕ್ಕೂ ಮುಸ್ಲಿಂ ಸಮುದಾಯದ ವಿರೋಧಿಯಲ್ಲ ಎಂದು ಕೆ.ಸಿ.ರತನ್ ಗುಡುಗಿದರು.
ನಮ್ಮ ಪಕ್ಷದ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರು ಗೆದ್ದರೆ ಉತ್ತಮ ಅಭಿವೃದ್ಧಿ ಕಾರ್ಯಗಳಾದ ಮೂಗ್ತಿಹಳ್ಳಿಯಿಂದ ಹ್ಯಾಂಡ್ ಪೋಸ್ಟ್ ವರೆಗಿನ ದ್ವಿಪಥ ರಸ್ತೆ ನಿರ್ಮಾಣ,ತಾಲ್ಲೂಕು ಕೇಂದ್ರದಲ್ಲಿ ದಲಿತ ಸಮುದಾಯಕ್ಕೆ ಅಂಬೇಡ್ಕರ್ ಭವನ ನಿರ್ಮಾಣ, ಮೂಡಿಗೆರೆ ತಾಲ್ಲೂಕಿನ ಸರ್ಕಾರಿ ಶಾಲೆಗಳನ್ನು ಉನ್ನತೀಕರಣ ಮಾಡುವ ಮೂಲಕ ಮಾದರಿ ಶಾಲೆ ಮಾಡುವುದು, ಮೂಡಿಗೆರೆ ತಾಲ್ಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎಂದು ಹೇಳಿದರು.
ದೀಪಕ್ ದೊಡ್ಡಯ್ಯ ಅವರನ್ನು ಗೆಲ್ಲಿಸುವ ಮೂಲಕ ಸಿ.ಟಿ‌.ರವಿಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದು,ಒಂದುವೇಳೆ ಸಿ.ಟಿ.ರವಿಯವರು ಮುಖ್ಯಮಂತ್ರಿಯಾದರೆ ನಮ್ಮ ಜಿಲ್ಲೆ ಮತ್ತು ತಾಲ್ಲೂಕು ಅಭಿವೃದ್ಧಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಂ.ಪಿ.ಕುಮಾರಸ್ವಾಮಿ ಅವರು ಉತ್ತಮ ನಾಯಕತ್ವ ಗುಣ ಹೊಂದಿಲ್ಲ,ಹುಲ್ಲೆಮನೆ ಕುಂದೂರಿನ ಆನೆ ದಾಳಿಯಲ್ಲಿ ಸಂಭವಿಸಿದ ಸಾವು-ನೋವುಗಳಿಗೆ ಅವರು ಸ್ಪಂದಿಸದ ರೀತಿ ಅವರ ಆಡಳಿತಕ್ಕೆ ಹಿಡಿದ ಕನ್ನಡಿ ಎಂದು
ಮಾಜಿ ಶಾಸಕರಾದ ಎಂ.ಪಿ.ಕುಮಾರಸ್ವಾಮಿಯವರ ವಿರುದ್ಧ ಮಾತಿನಲ್ಲಿ ಚಾಟಿ ಬೀಸಿದರು.

ಈ ಸಂದರ್ಭದಲ್ಲಿ ಪರಿಕ್ಷಿತ್ ಜಾವಳಿ,ನಯನ ತಳವಾರ, ಬಿಜೆಪಿ ಪಕ್ಷದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾದ ಪಂಚಾಕ್ಷರಿ, ಬಿಜೆಪಿ ಪಕ್ಷದ ಚುನಾವಣಾ ನಿರ್ವಹಣಾ ಸಮಿತಿಯ ಪ್ರವೀಣ್ ಉಪಸ್ಥಿತರಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

More Stories

Leave a Reply

Your email address will not be published. Required fields are marked *

You may have missed