“ಅಕ್ರಮ ತಡೆಗಟ್ಟಲು ಚುನಾವಣಾ ಆಯೋಗ ಕ್ರಮ ವಹಿಸಬೇಕು: ಕೆ.ಸಿ.ಚಂದ್ರಶೇಖರ್.”
1 min read
ಮತದಾನ ಹತ್ತಿರ ಸಮೀಪಿಸುತ್ತಿದ್ದಂತೆ ಹಣಬಲವಿರುವ ಪಕ್ಷಗಳು ಮತದಾರರಲ್ಲಿ ಆಮಿಷವೊಡ್ಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೆ ತಲೆ ಕೆಳಗೆ ಮಾಡುವವರ ವಿರುದ್ಧ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಕೀಲರಾದ ಕೆ.ಸಿ. ಚಂದ್ರಶೇಖರ್ ಒತ್ತಾಯಿಸಿದರು.
ಶನಿವಾರ ನಮ್ಮ ವಾಹಿನಿಯೊಂದಿಗೆ ಮಾತನಾಡಿದ ಅವರು, ಚುನಾವಣೆ ಒಂದು ಹಬ್ಬ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡುವುದರಿಂದ ಜನರ ಸಮಸ್ಯೆಗಳಿಗೆ ಮುಕ್ತಿ ಕಂಡುಕೊಳ್ಳಲು ಇದೊಂದು ಸುವರ್ಣ ಅವಕಾಶ. ಈ ಅವಕಾಶ ಒಮ್ಮೆ ತಪ್ಪಿದರೆ 5 ವರ್ಷ ಜನತೆ ಸಂಕಷ್ಟದಲ್ಲಿ ಸಿಲುಕಬೇಕಾಗುತ್ತದೆ. ಈಗಾಗಲೇ 42 ವರ್ಷದಿಂದ ಮೂಡಿಗೆರೆ ಕ್ಷೇತ್ರ ಅಭಿವೃದ್ಧಿಯಾಗಿಲ್ಲ. ಜನತೆ ಬದಲಾವಣೆ ಬೇಕೆಂದು ಬಯಸಿದ್ದಾರೆ. ಆದರೆ ಹಣಬಲದಿಂದ ಮತದಾರರ ಓಲೈಕೆ ಮಾಡುವ ತಂತ್ರಕ್ಕೆ ಚುನಾವಣಾ
ಆಯೋಗ ಕಡಿವಾಣ ಹಾಕಬೇಕಿದೆ ಎಂದು ಹೇಳಿದರು.
ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಸಿಪಿಐ, ಬಿಎಸ್ ಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಕೂಡ ಸ್ಪರ್ಧಿಸಿದ್ದಾರೆ.ಆದರೆ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಹಣಬಲವಿರುವ ಘಟಾನುಘಟಿಗಳು ಸ್ಪರ್ಧಿಸಿದ್ದರಿಂದ ಹಣ, ಹೆಂಡ, ಗೃಹಪಯೋಗಿ ವಸ್ತುಗಳನ್ನು ನೀಡುವ ಮೂಲಕ ಮತದಾರರ ಓಲೈಕೆಯ ಕಾರ್ಯವನ್ನು
ಮತದಾನದ ಕೊನೆಯ ಎರಡು ದಿನ ಪ್ರಾರಂಭಿಸುತ್ತಾರೆ. ಆ ಸಂದರ್ಭದಲ್ಲಿ ಚುನಾವಣಾ ಆಯೋಗ ಹದ್ದಿನ ಕಣ್ಣಿನಂತೆ
ಕಾರ್ಯ ನಿರ್ವಹಿಸಿ ಪಾರದರ್ಶಕತೆಯ
ಚುನಾವಣೆ ನಡೆಸಲು ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.



