“ಅಲ್ಪಸಂಖ್ಯಾತರ ಇಲಾಖೆಯ ಸಂಘಟನಾ ಕಾರ್ಯದರ್ಶಿಯಾಗಿ ಹರ್ಷ ಮೆಲ್ವಿನ್ ಲಸ್ರಾದೊ ಆಯ್ಕೆ.”
1 min read
ಮಾನ್ಯ ಎ.ಐ.ಸಿ.ಸಿ ಅಧ್ಯಕ್ಷರಾದ ಜನಾಬ್ ಇಮ್ರಾನ್ ಪ್ರತಾಪಘರ್ಹಿ ಸಂಸದರ ಅನುಮೋದನೆಯ ಮೇರೆಗೆ ಹರ್ಷ ಮೆಲ್ವಿನ್ ಲಸ್ರಾದೊ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಅಲ್ಪಸಂಖ್ಯಾತರ ಇಲಾಖೆಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತ ಇಲಾಖೆಯ ಅಧ್ಯಕ್ಷರಾದ ಕೆ.ಅಬ್ದುಲ್ ಜಬ್ಬಾರ್ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಇಲಾಖೆಯನ್ನು ಬಲಪಡಿಸಲು ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ನೀವು ಶ್ರಮಿಸುತ್ತಿದ್ದೀರಿ ಎಂದು ಶ್ಲಾಘಿಸಿದ್ದಾರೆ.
ಇವರು ಈ ಹಿಂದೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರಾಗಿದ್ದರು.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.




