लाइव कैलेंडर

October 2026
M T W T F S S
 1234
567891011
12131415161718
19202122232425
262728293031  
01/10/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಪ್ರಪಾತಕ್ಕೆ ಉರುಳಿಬಿದ್ದ ಟಿಪ್ಪರ್ : ಚಾಲಕನಿಗೆ ಗಂಭೀರ ಗಾಯ ; ಪ್ರಾಣಾಪಾಯದಿಂದ ಪಾರು.”

1 min read

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಕೊಟ್ಟಿಗೆಹಾರದ,ಚಾರ್ಮಾಡಿ ಘಾಟಿಯ,ಸೋಮನಕಾಡು ಸಮೀಪ ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ದಿನಾಂಕ 12/01/2024ರ ಶುಕ್ರವಾರದಂದು ಮಧ್ಯರಾತ್ರಿ ನಡೆದಿದೆ.

ಮೂಡಿಗೆರೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಟಿಪ್ಪರ್ ಚಾರ್ಮಾಡಿ ಘಾಟ್ ನಲ್ಲಿ ಮಂಜು ಕವಿದ ವಾತಾವರಣವಿದ್ದುದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.

 

ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು,ಚಾಲಕನ ಸೊಂಟಕ್ಕೆ ತುಂಬಾ ಪೆಟ್ಟಾಗಿದ್ದು ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕ ಮತ್ತು ಟಿಪ್ಪರನ್ನು ಮೇಲೆತ್ತುವ ಕಾರ್ಯಾಚರಣೆಯ ವೇಳೆ ಬಣಕಲ್ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಅಭಿಷೇಕ್,ಅರಣ್ಯ ಇಲಾಖೆಯ ಬೀಟ್ ಫಾರೆಸ್ಟ್ ಅಭಿಜಿತ್,ಸಮಾಜ ಸೇವಕ ಆರಿಫ್ ಬಣಕಲ್ ಹಾಗೂ ಕುಂಜಿಮೋಣು ಕೊಟ್ಟಿಗೆಹಾರ ಕಾರ್ಯಾಚರಣೆಯಲ್ಲಿ ಇದ್ದರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

More Stories

Leave a Reply

Your email address will not be published. Required fields are marked *

You may have missed