लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

Ration-Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ?

(ration-card) ಪಡಿತರ ಚೀಟಿ ಸರ್ಕಾರದ ವಿವಿಧ ಸೌಲಭ್ಯದ ಜೊತೆಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ಪಡೆಯಲು ಕಡ್ಡಾಯ. ಅಲ್ಲದೆ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪಾನ್ ಕಾರ್ಡ್, ಚಾಲಕರ ಪರವಾನಗಿ ಇತ್ಯಾದಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಆದರೆ ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
(ಗ್ರಾಮಾಂತರ ಪ್ರದೇಶ)
* ನಿಮ್ಮ ಗ್ರಾಮ ಪಂಚಾಯಿತಿಯ ಹೆಸರು
* ಈಗ ವಾಸ ಮಾಡುತ್ತಿರುವ ಮನೆ ವಿಳಾಸ
* ಮನೆಯ ಆಸ್ತಿ ಸಂಖ್ಯೆ ವಿವರ
* ಮನೆಯ ವಿದ್ಯುತ್‌ ಸಂಪರ್ಕದ ಬಿಲ್‌ ಪ್ರತಿ
* ಕುಟುಂಬದ ಎಲ್ಲ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
* ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
* ನಿಮ್ಮ ಕುಟುಂಬಕ್ಕಿರುವ ಅಡುಗೆ ಅನಿಲದ ಸರಬರಾಜಿನ ಇತ್ತಿಚಿನ ಬಿಲ್/ರಶೀದಿ.

(ನಗರ / ಪಟ್ಟಣ ಪ್ರದೇಶ)
* ನೀವು ವಾಸವಿರುವ ನಗರಸಭೆ / ಪುರಸಭೆ / ನಗರ ಪಾಲಿಕೆಯ ವಾರ್ಡ್ ಸಂಖ್ಯೆ
* ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶದವರಾಗಿದ್ದಲ್ಲಿ (ಬಿಬಿಎಂಪಿ ಪ್ರದೇಶ) ನೀವು ಆಹಾರ ಇಲಾಖೆಯ ಯಾವ ವಲಯ ವ್ಯಾಪ್ತಿಯಲ್ಲಿದ್ದೀರಿ ಎಂಬ ಬಗ್ಗೆ ಮಾಹಿತಿ.
* ನಿಮ್ಮ ಮನೆಯ ವಿದ್ಯುತ್ ಬಿಲ್
* ನಿಮ್ಮ ನಿವಾಸದ ಪೂರ್ಣ ವಿಳಾಸ (ಅಂಚೆ ಪಿನ್ ಕೋಡ್‌ ಕಡ್ಡಾಯ). ಸ್ವಂತ ಮನೆಯಾಗಿದ್ದಲ್ಲಿ ಮನೆಯ ಆಸ್ತಿ ಸಂಖ್ಯೆ ವಿವರ, ನಿಮ್ಮ ಮನೆ ವಿಳಾಸ ಹುಡುಕಲು ಸುಲಭವಾಗುವ ಹತ್ತಿರದ ಸ್ಥಳದ ಗುರುತು
* ಕುಟುಂಬದ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
* ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
* ನಿಮ್ಮ ಸಂಪರ್ಕದ ಮೊಬೈಲ್ ನಂಬರ್ (ಕಡ್ಡಾಯ), ಸ್ವಂತ ಮೊಬೈಲ್ ಇಲ್ಲದಿದ್ದರೂ ನಿಮ್ಮನ್ನು ಸಂಪರ್ಕಿಸಬಹುದಾದ ಯಾವುದಾದರೂ ಮೊಬೈಲ್ ಸಂಖ್ಯೆಯನ್ನು ನೀಡುವುದು.
* ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ.
* ನಿಮ್ಮ ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ

ಅರ್ಜಿ ಸಲ್ಲಿಸುವುದು ಹೇಗೆ?:
* ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬೇಕಿದ್ದರೆ ನೀವು ಆಹಾರ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ. (https://ahara.kar.nic.in/)
* ಇ-ಸರ್ವಿಸ್‌ (ಇ-ಸೇವೆ) ಮೇಲೆ ಕ್ಲಿಕ್‌ ಮಾಡಿ.
* ಇದರಲ್ಲಿ ಕೆಳಗಡೆ ನಿಮಗೆ ಇ-ಪಡಿತರ ಚೀಟಿ ಆಯ್ಕೆ ಕಾಣುತ್ತದೆ.
* ಅದರಲ್ಲಿ ಕೆಳಗಿನ ಬಾಣದ ಗುರುತಿನ ಮೇಲೆ ಕ್ಲಿಕ್‌ ಮಾಡಿದರೆ ಹೊಸ ಪಡಿತರ ಚೀಟಿ ಎಂಬ ಆಯ್ಕೆ ತೋರಿಸುತ್ತದೆ.
* ಅಲ್ಲಿ apl ಹಾಗೂ bpl ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್‌ ಮಾಡಿದ ಬಳಿಕ ಅಗತ್ಯ ದಾಖಲೆಗಳನ್ನು ನೀವು ಸಲ್ಲಿಸಬೇಕಾಗುತ್ತದೆ.

About Author

Leave a Reply

Your email address will not be published. Required fields are marked *

You may have missed