लाइव कैलेंडर

October 2026
M T W T F S S
 1234
567891011
12131415161718
19202122232425
262728293031  
01/10/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಶಿಬಾಜೆ: ಸ್ಟೇ ವಯರ್ ಮೂಲಕ ವಿದ್ಯುತ್ ಪ್ರವಹಿಸಿ ಯುವತಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ,ಬೆಳ್ತಂಗಡಿ ತಾಲ್ಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ಎಂಬಲ್ಲಿ ದಿನಾಂಕ 27/06/2024ರ ಗುರುವಾರ ಸಂಜೆ ನಡೆದಿದೆ.

ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ (20 ವರ್ಷ) ಮೃತ ದುರ್ದೈವಿ.ಮನೆಯ ರಸ್ತೆಗೆ ಪಾರ್ಸೆಲ್ ಬಂದಿದ್ದರಿಂದ ಅದನ್ನು ಪಡೆಯಲು ರಸ್ತೆಗೆ ಬಂದಾಗ ನೀರಿನಲ್ಲಿ ನೀರಿನಲ್ಲಿದ್ದ ಸ್ಟೇ ವಯರ್ ಮೂಲಕ ವಿದ್ಯುತ್ ಪ್ರವಹಿಸಿ ಯುವತಿ ಸಾವನ್ನಪ್ಪಿದ್ದಾಳೆ.

ಯುವತಿಯ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.ಆಸ್ಪತ್ರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಯುವತಿ ಕೊಕ್ಕಡ ಸಾಯಿ ಮೆಡಿಕಲ್ ನಲ್ಲಿ ಉದ್ಯೋಗದಲ್ಲಿ ಇದ್ದಳು. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿ ತಂದೆ,ತಾಯಿ,ಹಾಗೂ ತಂಗಿಯನ್ನು ಅಗಲಿದ್ದಾರೆ.

ಕೊಕ್ಕಡ – ಧರ್ಮಸ್ಥಳ ಮಾರ್ಗದ ವಿದ್ಯುತ್ ಸಂಪರ್ಕ ವಯರ್ ಗಳು ಹೆಚ್ಚಾಗಿ ಮರಗಳ ಮೇಲೆ ಹಾದು ಹೋಗಿದ್ದು,ಗಾಳಿ ಬಂದಾಗ ಒಂದಕ್ಕೊಂದು ತಾಗಿ ಕರೆಂಟ್ ಶಾಕ್ ಆಗುತ್ತದೆ.ಇಲ್ಲಿ ಮಳೆಗಾಲದಲ್ಲಿ ಮರದ ಕೊಂಬೆಗಳು ಗಾಳಿಗೆ ಮುರಿದು ವಿದ್ಯುತ್ ತಂತಿಗಳ ಮೇಲೆ ಬಿದ್ದು ತಂತಿ ತುಂಡಾಗಿದ್ದರು ಸರಿಪಡಿಸಲು ಸಮರ್ಪಕವಾದ ಲೈನ್ ಮ್ಯಾನ್ ಗಳು ಕೂಡ ಇಲ್ಲ,ಈ ಕಾರಣದಿಂದ ಘಟನೆಯ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ಈ ಘಟನೆಗೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ನೇರ ಕಾರಣ ಎಂದು ಗ್ರಾಮಸ್ಥರು ದೂರಿದ್ದಾರೆ.

✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

More Stories

Leave a Reply

Your email address will not be published. Required fields are marked *

You may have missed