“ಗಾಳಿ ಮಳೆಯ ರಭಸಕ್ಕೆ ಧರೆಗುರುಳಿದ ಭಾರಿ ಗಾತ್ರದ ಮರ : ತೆರವುಗೊಳಿಸಿ ಸಂಚಾರಕ್ಕೆ ಅನುವು.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಮಾಕೋನಹಳ್ಳಿ ಸಮೀಪದಲ್ಲಿ ಗಾಳಿ ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರವೊಂದು ಮಂಗಳವಾರ ಬೆಳಗ್ಗೆ ಬಿದಿದ್ದು,ಸುಮಾರು 4 ಗಂಟೆ ವಾಹನ ಸಂಚಾರಕ್ಕೆ ತೊಡಕುಂಟಾಯಿತಲ್ಲದೇ ಆ ಮರ ವಿದ್ಯುತ್ ಲೈನಿನ ಮೇಲೂ ಬಿದ್ದಿದ್ದರಿಂದ ವಿದ್ಯುತ್ ವ್ಯತ್ಯಯವು ಉಂಟಾಗಿತ್ತು.
ಕೂಡಲೇ ಮೂಡಿಗೆರೆ ಶೌರ್ಯ ವಿಪತ್ತು ನಿರ್ವಹಣಾ ತಂಡ, ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿದರು.ವಿದ್ಯುತ್ ಲೈನ್ ಸರಿಪಡಿಸಿ ವಿದ್ಯುತ್ ಸಂಪರ್ಕ ಮರುಸ್ಥಾಪನೆಗೆ ಕ್ರಮ ವಹಿಸಲಾಗಿದೆ.
ಕಾರ್ಯಚರಣೆಯಲ್ಲಿ ಶೌರ್ಯ ವಿಪತ್ತು ತಂಡದ ಮಾಸ್ಟರ್ ಪ್ರವೀಣ್ ಪೂಜಾರಿ,ಕಿಶೋರ್,ಗೀತಾ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಮೆಸ್ಕಾಂ ಸಿಬ್ಬಂದಿಗಳು ತೆರವು ಕಾರ್ಯಾಚರಣೆಯಲ್ಲಿದ್ದರು.
✍️ಬರಹ ಕೃಪೆ.✍️

ಸಿದ್ದಿಕ್ ಚಕ್ಕಮಕ್ಕಿ.
🎙ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್, ಅವಿನ್ ಟಿವಿ.
9448305990.

