ಶಿಕ್ಷಣಕ್ಕೆ ಬೇಕಾದ ಎಲ್ಲಾ ಸೌಲಭ್ಯ ಒದಗಿಸಲಾಗುವುದು: ನಯನಾ ಮೋಟಮ್ಮ..
1 min read
ಶಿಕ್ಷಣಕ್ಕೆ ಬೇಕಾದ ಎಲ್ಲಾ ಸೌಲಭ್ಯ
ಒದಗಿಸಲಾಗುವುದು: ನಯನಾ ಮೋಟಮ್ಮ




ಮೂಡಿಗೆರೆ: ನಮ್ಮ ಸರಕಾರ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಿದೆ. ಹಾಗಾಗಿ ನನ್ನ ಅಧಿಕಾರದ ಅವಧಿಯಲ್ಲಿ ತನ್ನ ಕ್ಷೇತ್ರದಲ್ಲಿರುವ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಕೊರೆತೆಯಾಗದಂತೆ “ಎಲ್ಲಾ ಸೌಲಭ್ಯ ಒದಗಿಸಲಾಗುವುದು ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.
ಅವರು ಸೋಮವಾರ ಪಟ್ಟಣದ ಡಿಎಸ್‌ಬಿಜಿ ಕಾಲೇಜಿನಲ್ಲಿ ರುಸಾ ಅನುದಾನದ 1 ಕೋಟಿ ರೂ ವೆಚ್ಚದಲ್ಲಿ ರೈಟ್ಸ್ ಸಂಸ್ಥೆಯಿಂದ ನೂತನವಾಗಿ ನಿರ್ಮಾಣಗೊಂಡಿದ್ದ 3 ತರಗತಿ ಕೊಠಡಿ ಹಾಗೂ ಇನ್‌ಡೋರ್ ಸ್ಟೇಡಿಯಂ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನಲ್ಲಿ ಅಗತ್ಯವಾದ ಕೊಠಡಿಗಳು ಸೇರಿದಂತೆ ಶೀಕ್ಷಣ ಪಡೆಯಲು ಪೂರಕವಾದ ಮೂಲ ಸೌಲಭ್ಯ ಒದಗಿಸಲಾಗಿದೆ. ಇದನ್ನು ತಾಲೂಕಿನ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜು ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಕಾಲೇಜಿನ ಎಲ್ಲಾ ಕೊಠಡಿಗಳನ್ನು ಪರಿಶೀಲನೆ ನಡೆಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಅಶೋಕ್, ಕಲೀಮುಲ್ಲಾ, ಆಲ್ವಿನ್ ರೋಡ್ರಿಗ್ರೆಸ್, ಕಾಲೇಜು ಪ್ರಾಂಶುಪಾಲರಾದ ಕೆ.ಟಿ.ದಶರಥ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

