ಉಪಜಾತಿ ” ಗೊತ್ತಿಲ್ಲ ” ಎಂದು ನಮೂದಿಸಿ… ಗಣೇಶ್ ಪ್ರಸಾದ್.
1 min read
ಆದಿದ್ರಾವಿಡರು ಉಪಜಾತಿ ‘ಗೊತ್ತಿಲ್ಲ’ ಎಂದು ನಮೂದಿಸಿ: ಗಣೇಶ್ ಪ್ರಸಾದ್
ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಒದಗಿಸುವ ನಿಟ್ಟಿನಲ್ಲಿ ಹೈಕೋರ್ಟ್ ನಿವೃತ್ತ ನ್ಯಾ| ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದಿಂದ ಸಮೀಕ್ಷೆ ಆರಂಭವಾಗಿದ್ದು, ಶ್ರೀ ಸತ್ಯ ಸಾರಮಾನಿ ಕಾನದ-ಕಟದ ಆರಾಧಕ ತುಳು ಭಾಷಿಕ ಆದಿ ದ್ರಾವಿಡ ಸಮುದಾಯ ಮೂಲ ಜಾತಿಯಾಗಿಯೂ ಹಾಗೂ ಉಪ ಜಾತಿ ‘ಗೊತ್ತಿಲ್ಲ’ವೆಂದೇ ನಮೂದಿಸುವಂತೆ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್ ಸಲಹೆ ನೀಡಿದ್ದಾರೆ.
ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ನಮ್ಮದು ಪ್ರತ್ಯೇಕ ಮೂಲ ಜಾತಿ ಅಥವಾ ಉಪಜಾತಿ ಇಲ್ಲದ ಆದಿ ದ್ರಾವಿಡ ಸಮುದಾಯ ಎಂದು ಪ್ರತ್ಯೇಕವಾಗಿ ಗುರುತಿಸಲು
ಹಾಗೂ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ನಮ್ಮ ಸಮುದಾಯದ ಉಪ ಜಾತಿಯನ್ನು ಸೇರ್ಪಡೆಗೊಳಿಸಲು ಇದರಿಂದ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಸಂಘ ನಿರಂತರ ಶ್ರಮಿಸುತ್ತಿದ್ದು, ಸಮುದಾಯ ಒಮ್ಮತದಿಂದ ಬೇಕಾಗಿದೆ ಎಂದರು. ಮುಂದುವರೆಯ
ಸಮುದಾಯಕ್ಕೆ ಗೌರವಯುತ ಉಪಜಾತಿ ಹೆಸರು ಸೇರ್ಪಡೆಗೊಳಿಸುವ ಬಗ್ಗೆ ಸಂಘ ಹೋರಾಟಕ್ಕೆ ಮುಂದಾಗಿದೆ ಇದರೊಂದಿಗೆ ಸಮುದಾಯದವರು ಕೈಜೋಡಿಸಿ ಸಮೀಕ್ಷೆಯ ವೇಳೆ ಉಪ ಜಾತಿ ಕಾಲಂನಲ್ಲಿ ಗೊತ್ತಿಲ್ಲ ಎಂಬುದಾಗಿಯೇ ನಮೂದಿಸಬೇಕು ಎಂದು ಅವರು ಹೇಳಿದರು.
ಗೌರವಾಧ್ಯಕ್ಷ ಶಿವಾನಂದ ಬಳ್ಳಾಲ್ ಬಾಗ್, ಜಿಲ್ಲಾಧ್ಯಕ್ಷ ಶ್ರೀನಿವಾಸ ಅರ್ಬಿಗುಡ್ಡೆ ರಾಜ್ಯ ಜತೆ ಕಾರ್ಯದರ್ಶಿ ಸುರೇಶ್ ಪಿ.ಬಿ. ಉಪಸ್ಥಿತರಿದ್ದರು.

