ಯವುದೇ ಒತ್ತಡಕ್ಕೆ ಮಣಿಯದೇ ರಸ್ತೆ ಅಗಲೀಕರಣಕ್ಕೆ ಮುಂದಾಗಬೇಕು:* *ಬಿ.ಸಿ.ದಯಾಕರ್*……
1 min read
*ಯವುದೇ ಒತ್ತಡಕ್ಕೆ ಮಣಿಯದೇ ರಸ್ತೆ ಅಗಲೀಕರಣಕ್ಕೆ ಮುಂದಾಗಬೇಕು:* *ಬಿ.ಸಿ.ದಯಾಕರ್*
ಮೂಡಿಗೆರೆ ಹ್ಯಾಂಡ್ಪೋಸ್ಟ್ ನಿಂದ ಚಿಕ್ಕಮಗಳೂರು ಮೂಗುತಿಹಳ್ಳಿವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶೀಘ್ರವಾಗಿ ಚಾಲನೆ ನೀಡಬೇಕೆಂದು ರೈತ ಸಂಘದ ಹಸಿರುಸೇನೆ ಕಾರ್ಯಾಧ್ಯಕ್ಷ ಬಿ.ಸಿ.ದಯಾಕರ್ ಒತ್ತಾಯಿಸಿದರು.
ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಸ್ತೆ ಅಗಲೀಕರಣಕ್ಕಾಗಿ ರಸ್ತೆ ಬದಿಯಲ್ಲಿರುವ ಮರಗಳನ್ನು ಕಡಿತಲೆ ಮಾಡುವ ಬಗ್ಗೆ ಬಿಎಸ್ಪಿ ಪಕ್ಷದ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿರುವುದು ಖಂಡನೀಯ. ರೈತರು ತ್ವರಿತವಾಗಿ ಬೆಳೆ ಸಾಗಿಸಲು, ಅಲ್ಲದೇ ವಾಹನದ
ದಟ್ಟಣೆಯಿಂದ ಪಟ್ಟಣಕ್ಕೆ ಬರುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ರತಿನಿತ್ಯ ಪಡುತ್ತಿರುವ ಸಂಕಷ್ಟ ನಿವಾರಣೆಯಾಗಬೇಕೆಂದರೆ ರಸ್ತೆ ಅಗಲೀಕರಣ ಆಗಲೇಬೇಕು. ರಸ್ತೆ ಅಗಲೀಕರಣಕ್ಕಾಗಿ ಕಡಿತಲೆಗಾಗಿ 3122 ಮರ ಗುರುತಿಸಲಾಗಿದೆ. ಹೆದ್ದಾರಿ ಪ್ರಾಧಿಕಾರ ಮರ ತೆಗೆದ ಪ್ರದೇಶದಲ್ಲಿ ಹತ್ತತ್ತು ಗಿಡಗಳನ್ನು ಬೆಳೆಸಬೇಕೆಂದು ಆಗ್ರಹಿಸಿದರು.
ಜಿಲ್ಲಾ ಸಂಚಾಲಕ ಡಿ.ಎಸ್.ರಮೇಶ್ಗೌಡ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ರಸ್ತೆ ಅಗಲೀಕರಣವಾಗಿದೆ. ಆದರೆ ಮೂಡಿಗೆರೆಯಲ್ಲಿ ಮಾತ್ರ ರಸ್ತೆ ಅಗಲೀಕರಣ ಭಾಗ್ಯ ಕಂಡಿಲ್ಲ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಅನೇಕ ಪ್ರವಾಸಿ ತಾಣಗಳಿವೆ. ಇದರಿಂದ ಪ್ರತಿ ದಿನ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಈಗಾಗಲೇ ರಸ್ತೆ ಅಗಲೀಕರಣಕ್ಕೆ ಹೆದ್ದಾರಿ ಪ್ರಾಧಿಕಾರ ಶೇ.90ರಷ್ಟು ಪ್ರಕ್ರಿಯೆ ಮುಗಿಸಿದೆ. ಭೂ ಸ್ವಾಧೀನ ಹಾಗೂ ಮರಗಳ ಕಡಿತಲೆ ಬಾಕಿ ಇದ್ದು, ಈ ಪ್ರಕ್ರಿಯೆ ತ್ವರಿತ ಗತಿಯಲ್ಲಿ ಸಾಗಬೇಕೆಂದು ಒತ್ತಾಯಿಸಿದರು.
ಉಪಾಧ್ಯಕ್ಷ ಸುಧೀರ್, ತಾಲೂಕು ಸಂಚಾಲಕ ರಾಮಚಂದ್ರೇಗೌಡ ಉಪಸ್ಥಿತರಿದ್ದರು.

