ಜಿಲ್ಲಾ ಬೆಳೆಗಾರರ ಸಂಘ* *ಅಸ್ತಿತ್ವಕ್ಕೆ,……
1 min read
*ನೂತನ ಸಾರಥಿಯೊಂದಿಗೆ* *ಜಿಲ್ಲಾ ಬೆಳೆಗಾರರ ಸಂಘ* *ಅಸ್ತಿತ್ವಕ್ಕೆ,ಅಧ್ಯಕ್ಷರಾಗಿ* *ಕೆ.ಯು ರತೀಶ್ ಕುಮಾರ್ ಅವಿರೋಧ ಆಯ್ಕೆ* .
ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷರಾದ ಶ್ರೀಯುತ ಎಂ ಜೆ ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷರಾದ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ ತಾಲ್ಲೂಕು ಬೆಳಗಾರರ ಸಂಘದ ಕಟ್ಟಡದಲ್ಲಿ ಇಂದು ನಡೆದ ಚಿಕ್ಕಮಗಳೂರು ಜಿಲ್ಲೆಯ 10 ಸಹಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ಕೆ ರತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಕಾಫಿ ಮಂಡಳಿ ಅಧ್ಯಕ್ಷರಾದ ಎಂಜೆ ದಿನೇಶ್ ರವರು, ಕಾಫಿ, ಕಾಳು ಮೆಣಸು, ಅಡಿಕೆ ಬೆಳೆಗಾರರ ಹಿತ ದೃಷ್ಟಿಯಿಂದ ಚಿಕ್ಕಮಗಳೂರು ಜಿಲ್ಲೆಗೆ ನೂತನ ಸಂಘಟನೆ ಅತ್ಯವಶ್ಯಕವಾಗಿದ್ದು, ಸಮಸ್ಯೆಗೆ ಸಂಘಟನೆಯೊಂದೆ ಪರಿಹಾರವಾಗಿದ್ದು,ಎಲ್ಲ ಬೆಳೆಗಾರರ ಹಿತ ಕಾಪಡಲು ಕಟಿಬದ್ಧರಾಗಿ ಕಾರ್ಯನಿರ್ವಹಿಸುವಂತೆ ನೂತನ ಅಧ್ಯಕ್ಷರಿಗೆ ಸಲಹೆ ನೀಡಿದರು.
ನೂತನ ಜಿಲ್ಲಾಧ್ಯಕ್ಷರಾದ ಕೆ.ಯು ರತೀಶ್ ಕುಮಾರ್ ಮಾತನಾಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧನಿದ್ದು, ಸಂಘಟನೆಯ ಹಿರಿಯರು ಇಟ್ಟಿರುವ ನಂಬಿಕೆಗೆ ದ್ರೋಹವಾಗದಂತೆ ಬೆಳೆಗಾರರ ಸರ್ವತೋಮುಖ ಅಭಿವೃದ್ಧಿಗೆ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.

