ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ…,
1 min read
ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ
ತರೀಕೆರೆ : ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸೇರಿದಂತೆ ಹಲವು ಸೌಲಭ್ಯಗಳು ಸಿಗುತ್ತಿವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ರಂಗೇನಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಎಸ್ಟಿಎಂಸಿ ಅಧ್ಯಕ್ಷ ಎಚ್. ವಿಶ್ವನಾಥ್ ಹೇಳಿದರು.
ಅವರು ತಾಲೂಕಿನ ರಂಗೇನಹಳ್ಳಿಯ ಕರ್ನಾ ಟಕ ಪಬ್ಲಿಕ್ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಾಮಾಜಿಕ ಲೆಕ್ಕ ಪರಿಶೋಧನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಂಗೇನಹಳ್ಳಿಯ ಕೆಪಿಎಸ್ ಶಾಲೆಯಲ್ಲಿ ಅನುಭವಿ ಶಿಕ್ಷಕರಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿದ್ದಾರೆ ಎಂದರು.
ತಾಲೂಕು ಲೆಕ್ಕ ಪರಿಶೋಧನಾ ಅಧಿಕಾರಿ ನಗೀನಾ ಮಾತನಾಡಿ, ಮಕ್ಕಳ ಸಮಗ್ರ ಶಿಕ್ಷಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಮಕ್ಕಳ ಕಲಿಕೆ ಗುಣಮಟ್ಟದಿಂದ ಇರಬೇಕು. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಜತೆಗೂಡಿ ಸಾಗಿದಾಗ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲು ಸಾಧ್ಯವಾಗುತ್ತದೆ. ಸರಕಾರಿ ಶಾಲೆಗಳಲ್ಲಿ ದೊರಕುವೆ ಎಲ್ಲಾ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಮುಡುಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ, ಎಸ್ ಡಿಎಂಸಿ ಸದಸ್ಯರಾದ ರಫೀಕ್, ವೇದಾವತಿ, ಪ್ರಭಾರ ಮುಖ್ಯ ಶಿಕ್ಷಕ ಶಿವಾನಂದ್, ಅಂಬಿಕಾ, ಗೀತಾಂಜಲಿ, ಶಾಂತಕುಮಾರಿ, ರಮ್ಯ ಇದ್ದರು…..
ವರದಿ..
ಭಾರತಿಉಮೇಶರಾಜಅರಸು..

