ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ……
1 min read
ದಿನಾಂಕ 30/07/2025 ರಂದು ಶ್ರೀ ಬಿ.ಎಸ್ ಜಯರಾಮ್ ಮಾನ್ಯ ಅಧ್ಯಕ್ಷರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಇವರ ಅಧ್ಯಕ್ಷತೆಯಲ್ಲಿ ಡಿ.ಎಸ್. ಬಿಳೀಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ
ಸಲಾಯಿತು.
ಹಾಜರಿದ್ದವರು:
ಶ್ರೀ. ಶಿವಾನಂದ ಸ್ವಾಮಿ, ಅಧ್ಯಕ್ಷರು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಶ್ರೀ ಬಿ.ಎಸ್ ಜಯರಾಮ್ ಮಾನ್ಯ ಅಧ್ಯಕ್ಷರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ
ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರುಗಳು
ಶ್ರೀ ರವಿಕುಮಾರ್ ಸಹಾಯಕ ನಿರ್ದೇಶಕರು ಕೌಶಲ್ಯಾಭಿವೃದ್ದಿ ಇಲಾಖೆ ಚಿಕ್ಕಮಗಳೂರು
ಪ್ರಾಂಶುಪಾಲರು , ಕೈಗಾರಿಕಾ ತರಭೇತಿ ಇಲಾಖೆ
ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕು ಪಂಚಾಯಿತಿ ಮೂಡಿಗೆರೆ
ಅನುಷ್ಠಾನ ಇಲಾಖೆ ಅಧಿಕಾರಿಗಳು
ಯುವನಿಧಿ ಫಲಾನುಭವಿಗಳು ಹಾಗೂ ವಿಧ್ಯಾರ್ಥಿಗಳು
ಶ್ರೀ ಶಿವಾನಂದ ಸ್ವಾಮಿ ಅಧ್ಯಕ್ಷರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರವರು ಯುವನಿಧಿ ಯೋಜನೆ ಬಗ್ಗೆ ವಿಧ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಯುವನಿಧಿ ಯೋಜನೆಯಡಿ ಡಿಗ್ರಿ ಮಾಡಿದ ವಿಧ್ಯಾರ್ಥಿಗಳಿಗೆ ರೂ.3000 ಹಾಗೂ ಡಿಪ್ಲೊಮೊ ಮಾಡಿದ ವಿಧ್ಯಾರ್ಥಿಗಳಿಗೆ ರೂ.1500 ನೀಡುತ್ತಿರುವುದಾಗಿಯೂ ಈ ಯೋಜನೆಯ ಸದುಪಯೋಗ ಪಡೆಯಲು ವಿಧ್ಯಾರ್ಥಿಗಳು ಕೌಶಲ್ಯಾಭಿವೃದ್ದಿ ಪೋರ್ಟಲ್ ನಲ್ಲಿ ನೊಂದಣಿ ಮಾಡಿಕೊಂಡು ಕೌಶಲ್ಯ ಮತ್ತು ಉದ್ಯಮಶೀಲ ತರಭೇತಿ ಪಡೆಯಲು ವಿಧ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು
ಶ್ರೀ ಬಿ.ಎಸ್. ಜಯರಾಂ ಮಾನ್ಯ ಅಧ್ಯಕ್ಷರು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರವರು ವಿಧ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಕೊಂಡು ಯೋಜನೆಯ ಸದುಪಯೋಗ ಪಡೆದು ಈ ಯೋಜನೆಯಿಂದ ಬರುವ ಹಣದಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಹಾಕುವುದರ ಮುಖಾಂತರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ವಿಧ್ಯಾರ್ಥಿಗಳಿಗೆ ಸಲಹೆ ನೀಡಲಾಯಿತು.

