ಸಮವಸ್ತ್ರ ವಿತರಣೆ ಕಾರ್ಯಕ್ರಮ……
1 min read
ಶ್ರೀ ಹೆಚ್.ಡಿ. ತಮ್ಮಯ್ಯ, ಮಾನ್ಯ ಶಾಸಕರು, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಇವರ
ಅಧ್ಯಕ್ಷತೆಯಲ್ಲಿ ಸಮವಸ್ತ್ರ ಕಾರ್ಯಕ್ರಮ
: 02.08.2025
ಸಮವಸ್ತ್ರದ ಸೀರೆಗಳ ವಿತರಣೆ
ಚಿಕ್ಕಮಗಳೂರು ತಾಲ್ಲೂಕಿನ 407 ಅಂಗನವಾಡಿ ಕೇಂದ್ರಗಳಿದ್ದು, ಸದರಿ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ಹಾಗೂ ಇತರೆ ಪರಿಕರಗಳ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಪ್ರತೀ ವರ್ಷವೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಉತ್ತಮ ಗುಣಮಟ್ಟದ ಎರಡು ಸಮವಸ್ತ್ರದ ಸೀರೆಗಳನ್ನು ವಿತರಿಸಲಾಗುತ್ತದೆ.
ಸಕ್ಷಮ್ ಅಂಗನವಾಡಿ ಕೇಂದ್ರಗಳಿಗೆ ಟಿ.ವಿ. & ಇತರೆ ಪರಿಕರ ವಿತರಣೆ
ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಚಿಕ್ಕಮಗಳೂರು ಯೋಜನೆಯಲ್ಲಿ 40 ಅಂಗನವಾಡಿ ಕೇಂದ್ರಗಳನ್ನು ಗುರುತಿಸಿದ್ದು, ಸದರಿ ಅಂಗನವಾಡಿ ಕೇಂದ್ರಗಳಿಗೆ ಟಿ.ವಿ. ಪೆನ್ಡ್ರೈವ್, ಸ್ಪೀಕರ್, ಸ್ಟೆಬಿಲೈಜರ್ ವಿತರಣೆ ಮಾಡುತ್ತಿದ್ದು ಅಂಗನವಾಡಿ ಕೇಂದ್ರಕ್ಕೆ ಆಗಮಿಸುವ 3 ರಿಂದ 6 ವರ್ಷದ ಮಕ್ಕಳಿಗೆ ಹಾಗೂ ಇತರೆ ಫಲಾನುಭವಿಗಳಿಗೆ ಶಿಕ್ಷಣ ನೀಡಲಾಗುವುದು.
ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ.
ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿ 50 ವರ್ಷಗಳ ಸವಿನೆನಪಿಗಾಗಿ ಅಕ್ಟೋಬರ್ 02 ನೇ ತಾರೀಖಿನಿಂದ 50 ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳು ಪ್ರಾರಂಭವಾಗುತ್ತಿದ್ದು, ಈಗಾಗಲೇ ಪಠ್ಯಪುಸ್ತಕಗಳು ಸರಬರಾಜಾಗಿರುತ್ತವೆ. ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮದಲ್ಲಿ ತರಗತಿಗಳನ್ನು ನಡೆಸಲಾಗುವುದು. 4 ರಿಂದ 5 ವರ್ಷದ ಮಕ್ಕಳಿಗೆ ಎಲ್.ಕೆ.ಜಿ. 5 ರಿಂದ 6 ವರ್ಷದ ಮಕ್ಕಳಿಗೆ ಯು.ಕೆ.ಜಿ. ಪ್ರತ್ಯೇಕ ಕೊಠಡಿಗಳಲ್ಲಿ ನಡೆಸಲಾಗುವುದು.
ಮೆಡಿಷನ್ ಕಿಟ್ ವಿತರಣೆ
ಪ್ರತಿ ವರ್ಷದಂತೆ ಈ ವರ್ಷವೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳಿಗೆ ಮೆಡಿಷನ್ ಕಿಟ್ ಸರಬರಾಜಾಗಿರುತ್ತದೆ. ಸದರಿ ಮೆಡಿಷನ್ ಕಿಟ್ಗಳನ್ನು ಅಂಗನವಾಡಿ ಫಲಾನುಭವಿಗಳಿಗೆ ಪ್ರಥಮ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ.
ವರದಿ..
ಭಾರತಿಉಮೇಶರಾಜಅರಸು..ಚಿಕ್ಕಮಗಳೂರು..
8971536986….

