लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಪ್ರಚಾರಕ್ಕಾಗಿ ಇಲ್ಲ ಸಲ್ಲದ ಆರೋಪ
ಚಿಕ್ಕಮಗಳೂರು: ಲೋಕಸಭೆ
ವಿರೋಧ ಪಕ್ಷದ ನಾಯಕರಾದ ರಾಹುಲ್ గాంధి ಅವರು ಪ್ರತಿ ಮೂರು ತಿಂಗಳಿಗೊಮ್ಮೆ ಯಾವುದಾದರೂ ಒಂದು ವಿಚಾರವನ್ನು ಇಟ್ಟುಕೊಂಡು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದೀಗ ಚುನಾವಣಾ ಆಯೋಗದ ವಿರುದ್ಧವೇ ಸುಳ್ಳು ಆರೋಪ ಮಾಡುವ ಮೂಲಕ ಪ್ರಚಾರ ಪಡೆಯುವ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಇದನ್ನು ನಿಲ್ಲಿಸಬೇಕು ಎಂದು ಜೆಡಿಎಸ್-ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗ ಮೋಸ ಮಾಡಿದೆ. ಬಿಜೆಪಿ ಪರ ನಿಂತಿದೆ ಎಂದು ಆರೋಪಿಸುತ್ತಿದ್ದಾರೆ. ಸೋತವರು ಗೆದ್ದವರನ್ನು ದೂರುವುದು ಸ್ವಾಭಾವಿಕ. ಆದರೆ ರಾಹುಲ್ ಗಾಂಧಿ ಇಂತ ಕೆಲಸ ಮಾಡಬಾರದಿತ್ತು ಎಂದರು. ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಅಂತರದಿಂದ ಗೆದ್ದವರು ಯಾರಾದರೂ ಇದ್ದರೆ ಅದು ಕಾಂಗ್ರೆಸ್ ನಾಯಕರು ಮಾತ್ರ ಅಸ್ಸಾಂ ಕಾಂಗ್ರೆಸ್ ಸಂಸದರೊಬ್ಬರು 10.12 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ. ಇರುವ 14 ಲಕ್ಷ ಮತಗಳಲ್ಲಿ 10.12 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಇನ್ನು ತಮಿಳುನಾಡಿನ ಶಶಿಕಾಂತ್ ಸೆಂಥಿಲ್ ಅವರು 5.72 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ. ಇವರೆಲ್ಲರೂ ಮೋಸದಿಂದಲೇ ಇಷ್ಟು ಮತಗಳ
ಅಂತರದಿಂದ ಗೆದ್ದಿದ್ದಾರೆ ಎಂದು ನಾವು ಆರೋಪಿಸಬಹುದೇ ಎಂದು ಪ್ರಶ್ನಿಸಿದರು.

ಕರ್ನಾಟಕದ ವಿಧಾನಸಭಾ ಚುನಾವಣೆ ವಿಷಯಕ್ಕೆ ಬಂದರೆ ಕಾಂಗ್ರೆಸ್ ನ 37 ಶಾಸಕರು 50 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. 49 ಕಾಂಗ್ರೆಸ್ ಶಾಸಕರು 25 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಇನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಒಂದು ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಹೀಗಿರುವಾಗ ನಿಮಗೆ ಬಂದ ಮತಗಳು ಮೋಸ ಮಾಡಿ ಬಂದ ಮತಗಳೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಾಗಿದೆ. ಈಗ ರಾಹುಲ್ ಗಾಂಧಿ ದೇಶದ ಆದ-ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕಿತ್ತು. ‘ಅದರೆ ಪ್ರತಿ ಮೂರು ತಿಂಗಳಿಗೊಮ್ಮೆ ಹೊಸ ಹೊಸ ವಿಚಾರಗಳನ್ನು ಇಟ್ಟುಕೊಂಡು ಬಂದು ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಭಾರತ ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಅಸಂಬದ್ಧ ಹೇಳಿಕೆಗಳನ್ನು ನೀಡಿದರು. ಬಳಿಕ ಅಮೆರಿಕ ಅಧ್ಯಕ್ಷ ಟ್ರಂಪ್ ಪರವಾಗಿ ನಿಂತರು. ಈಗ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎನ್ನುತ್ತಿದ್ದಾರೆ. ಹಿಂದೆ ಸ್ವಲ್ಪ ದಿನ ಸಂವಿಧಾನದ ಪುಸ್ತಕ ಇಟ್ಟುಕೊಂಡು ಓಡಾಡುತ್ತಿದ್ದರು. ಈಗ ಅವರ ಬಳಿ ಸಂವಿಧಾನದ ಪುಸ್ತಕ ಕಾಣುತ್ತಿಲ್ಲ ಎಂದು ಲೇವಡಿ ಮಾಡಿದರು. ವರದಿ..
ಭಾರತಿಉಮೇಶರಾಜಅರಸು.. ಚಿಕ್ಕಮಗಳೂರು..
8971536986….🙏

About Author

Leave a Reply

Your email address will not be published. Required fields are marked *

You may have missed