ಸಮ್ಮೇಳನಾಧ್ಯಕ್ಷರಾಗಿ ಪ್ರದೀಪ್ ಕುಮಾರ್ ಆಯ್ಕೆ. ಚಿಕ್ಕಮಗಳೂರು…..
1 min read
ಸಮ್ಮೇಳನಾಧ್ಯಕ್ಷರಾಗಿ ಪ್ರದೀಪ್ ಕುಮಾರ್ ಆಯ್ಕೆ.
ಚಿಕ್ಕಮಗಳೂರು..
ಅಂತರ ರಾಜ್ಯ ಪ್ರಪ್ರಥಮ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನದ ಅಧ್ಯಕ್ಷರಾಗಿ ಡಾ॥ ಪ್ರದೀಪ್ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಆಗಸ್ಟ್ 22 ರಂದು ಆಂಧ್ರಪ್ರದೇಶದ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಚಿಕ್ಕ ಮಗಳೂರು ಜಿಲ್ಲೆ, ಆಂಧ್ರಪ್ರದೇಶ, ತೆಲಂಗಾಣ, ಗೋವಾ ಮತ್ತು ಮಹಾ ರಾಷ್ಟ್ರ ರಾಜ್ಯಗಳ ಸಂಯುಕ್ತಾಶ್ರಯ ದಲ್ಲಿ ಆಯೋಜಿಸಿರುವ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಡಾ| ಪ್ರದೀಪ್ ಕುಮಾರ್ ಅವರನ್ನು ಸರ್ವನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಜನಿಸಿದ ಡಾ. ಪ್ರದೀಪ್ ಕುಮಾರ್ ಹೆಬ್ರಿ ಅವರು ಕಳೆದ 35 ವರ್ಷ ಗಳಿಂದ ವೈದ್ಯಕೀಯ ವೃತ್ತಿಯನ್ನು ಕೈಗೊಂಡು ಮಂಡ್ಯದಲ್ಲಿ ನೆಲೆಸಿದ್ದಾರೆ. ಪೂರ್ಣಕಾಲಿಕ ಸಾಹಿತಿ ಯೆನ್ನುವಷ್ಟು ಸಮೃದ್ಧ ಸಾಹಿತ್ಯವನ್ನು ಸೃಷ್ಟಿಸಿರುವ ಡಾ. ಪ್ರದೀಪ್ ಕುಮಾರ್ ಹೆಬ್ರಿಯವರು 220 ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ.

