लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಸವಿ ನೆನಪುಗಳು ಬೇಕು ಸವಿಯಲೀ ಬದುಕು……

ಶಬ್ದ ಅಥವಾ ಧ್ವನಿ ಕ್ರಮಬದ್ಧತೆಯ – ಶಿಸ್ತುಬದ್ಧತೆಯ ತರಂಗಗಳನ್ನು ಸಂಗೀತ ಎಂದು ಗ್ರಹಿಸಬಹುದೇ ?

ಅಥವಾ,

ಆ ಶಬ್ದಗಳ ಸುಶ್ರಾವ್ಯತೆ ಮಾತ್ರ ಸಂಗೀತವೇ ?

ಅಥವಾ,

ಧ್ವನಿ ಮತ್ತು ವಾದ್ಯಗಳ ಸಮ್ಮಿಲನದ ಭಾಷೆಗೆ ಸಂಗೀತ ಎನ್ನಬಹುದೇ……

ಅಥವಾ,

ಸಾಹಿತ್ಯ ಧ್ವನಿ ವಾದ್ಯಗಳ ಮಿಲನದ ಪ್ರಕ್ರಿಯೆಯೇ ಸಂಗೀತವೇ……

ಅಥವಾ,

ಧ್ವನಿಯ ಸ್ವರ ಲಯ ತಾಳಗಳ ರೂಪವೇ ಸಂಗೀತ ಸೃಷ್ಟಿಸುತ್ತದೆಯೇ…..

ಅದರ ನಿಜವಾದ ಅರ್ಥ ಏನೇ ಇರಲಿ ಮನುಷ್ಯ ಜೀವಿಯ ಬದುಕಿನಲ್ಲಿ ಅತಿಹೆಚ್ಚು ಆಕರ್ಷಕ ಧ್ವನಿ ಎಂದರೆ ಅದು ಸಾಮಾನ್ಯವಾಗಿ ಹಾಡುಗಳು ಎಂದು ಕರೆಯಲ್ಪಡುವ ಧ್ವನಿ ತರಂಗಗಳು…….

ಬಹುಶಃ ಹುಟ್ಟಿದ ಮಗುವಿನಿಂದ ವೃದ್ದರವರೆಗೆ ಒಂದಲ್ಲ ಒಂದು ರೀತಿಯ ಹಾಡುಗಳ ಮೋಹ ಅವರ ಮನಸ್ಸುಗಳ ಮೇಲೆ ಪ್ರಭಾವ ಬೀರುವುದನ್ನು ಕಾಣಬಹುದು……

ಕೇವಲ ಭಾರತ ದೇಶ ಮಾತ್ರವಲ್ಲ ಇಡೀ ಸೃಷ್ಟಿಯ ಮನುಷ್ಯ ಪ್ರಾಣಿಯ ಎಲ್ಲರಿಗೂ ಇದು ಅನ್ವಯಿಸುತ್ತದೆ. ಭಾಷೆಗಳನ್ನು ಮೀರಿ ಅನೇಕ ವೈವಿಧ್ಯಮಯ ಪ್ರಕಾರಗಳಲ್ಲಿ ಇದು ಅಸ್ತಿತ್ವದಲ್ಲಿದೆ…..

ಜನಪದವೇ ಇರಲಿ, ಪಾಶ್ಚಿಮಾತ್ಯವೇ ಇರಲಿ, ಮಧ್ಯಪ್ರಾಚ್ಯದ ಅಥವಾ ಆಫ್ರಿಕಾದ ಸಂಗೀತವೇ ಇರಲಿ ಒಟ್ಟಿನಲ್ಲಿ ಹಾಡುಗಳು ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ಎಲ್ಲಾ ಕಾಲಮಾನಗಳನ್ನು ಮೀರಿ ಬೆಳೆದಿದೆ……

ಆಧುನಿಕತೆ ಮತ್ತು ತಂತ್ರಜ್ಞಾನ ಬೆಳೆದಂತೆ ಮುಖ್ಯವಾಗಿ ಸಿನಿಮಾ ರಂಗದ ಅಭಿವೃದ್ಧಿಯೊಂದಿಗೆ ಈ ಕ್ಷಣದಲ್ಲಿ ಹಾಡುಗಳು ಉತ್ತುಂಗಕ್ಕೇರಿದೆ……

ಸಂಕೀರ್ಣ ಬದುಕಿನ ಜಂಜಡಗಳಿಂದ ನರಳುತ್ತಿರುವ ಮನುಷ್ಯ ಮನರಂಜನೆ ಅಥವಾ ಮನಸ್ಸುಗಳ ಪುನಶ್ಚೇತನಕ್ಕಾಗಿ ಸಂಗೀತದ ಮೊರೆ ಹೋಗುವುದು ಸಾಮಾನ್ಯವಾಗಿ ನಾವು‌ ಗಮನಿಸಿದ್ದೇವೆ ಮತ್ತು ಅನುಭವಿಸಿದ್ದೇವೆ…….

ಸಪ್ತ ಸ್ವರಗಳ ಸಹಾಯದಿಂದ ನವರಸಗಳನ್ನು ಹೊಮ್ಮಿಸುವ ಸಂಗೀತ ನಮ್ಮ ಭಾವನೆಗಳೊಂದಿಗೆ ಅಲೆಅಲೆಯಾಗಿ ತೇಲುತ್ತಾ ಸಾಗುವ ಪರಿ ಅನನ್ಯ….

ಎಷ್ಟೋ ಪ್ರೇಮಿಗಳಿಗೆ, ಎಷೋ ವಿರಹಿಗಳಿಗೆ, ಎಷ್ಟೋ ನೋವುಂಡವರಿಗೆ, ಎಷ್ಟೋ ಕನಸುಗಾರರಿಗೆ, ಎಷ್ಟೋ ನಿರಾಶಾವಾದಿಗಳಿಗೆ, ಎಷ್ಟೋ ಹೃದಯಹೀನರಿಗೆ ಒಂದು ಹಾಡು ಆ ಕ್ಷಣದ ಜೀವ ದ್ರವ್ಯ………..

ಭಾವನೆಗಳು ಅಕ್ಷರ ರೂಪದ ಸಾಹಿತ್ಯವಾಗಿ ಮೂಡಿದ ಮೇಲೆ ಆ ಅಕ್ಷರಗಳು ಮತ್ತೆ ಭಾವನೆಗಳಾಗಿ ಹಾಡಿನ ಮೂಲಕ ಪರಿವರ್ತನೆ ಹೊಂದಿ ಕೆಲವೊಮ್ಮೆ ಮತ್ತೆ ಅಕ್ಷರಗಳಾಗಿ ಮತ್ತೆ ಭಾವನೆಗಳಾಗುವ ಸರಪಳಿಯ ಕೊಂಡಿಯೇ ಅತ್ಯದ್ಭುತ…..

ಕೆಲವು ಅಪರೂಪದ ಸ್ವಾಭಾವಿಕ ಪ್ರತಿಭೆಗಳು ಎಲ್ಲಾ ಕ್ಷೇತ್ರಗಳಲ್ಲೂ ಉದಯಿಸಿವೆ. ಹೆಚ್ಚು ಶ್ರಮವಿಲ್ಲದೆ, ( ಅವರ ಪ್ರತಿಭೆಯ ಕಾರಣದಿಂದಾಗಿ ) ಆದರೆ ಶ್ರದ್ಧೆ ಮತ್ತು ಸಮರ್ಪಣಾ ಮನೋಭಾವದಿಂದ ತುಂಬಾ ಸರಳವಾಗಿ ಆ ಪ್ರತಿಭೆಯನ್ನು ದುಡಿಸಿಕೊಂಡಿದ್ದಾರೆ.

ಸುಖದ ಅನುಭವ ನಮಗೆ ಆಗಬೇಕಾದರೆ ಕಷ್ಟದ ಅರಿವು ಸಹ ಇರಲೇಬೇಕು ಎಂಬ ಸಮಧಾನದೊಂದಿಗೆ……….

ಬದುಕಿನ ಪಯಣದಲ್ಲಿ ಅನೇಕರಿಗೆ ಲಲಿತ ಕಲೆಗಳು ಸ್ಪೂರ್ತಿ ಪ್ರೇರಣೆ ಪ್ರಭಾವವನ್ನು ಹೊಂದುವ ಬಗೆಯನ್ನು ನೆನೆಯುತ್ತಾ…..

ನಮ್ಮೆಲ್ಲರ ಬದುಕಿನ,
ದೋಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಎಚ್. ಕೆ.
9663750451…..
9844013068……

About Author

Leave a Reply

Your email address will not be published. Required fields are marked *

You may have missed