ಚಾರ್ಮಾಡಿ ಘಾಟಿಯಲ್ಲಿ ಭಾರೀ ಸರಣಿ ಅಪಘಾತ: ಟ್ರಾಫಿಕ್ ಜಾಮ್..
1 min read
ಚಾರ್ಮಾಡಿ ಘಾಟಿಯಲ್ಲಿ ಭಾರೀ ಸರಣಿ ಅಪಘಾತ: ಟ್ರಾಫಿಕ್ ಜಾಮ್..
ಚಿಕ್ಕಮಗಳೂರು: ಜಿಲ್ಲೆಯ ಗಡಿ ಪ್ರದೇಶ ಚಾರ್ಮಾಡಿ ಘಾಟಿಯಲ್ಲಿ ಇಂದು ಸರಣಿ ಅಪಘಾತ ಸಂಭವಿಸಿದೆ.
KSRTC ಬಸ್ ಹಾಗೂ ಎರಡು ಲಾರಿಗಳ ಮತ್ತೆ ಅಪಘಾತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಹೊತ್ತ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ.
<ಇದೆ ವೇಳೆ ಹಿಂಬದಿಯಿಂದ ಮತ್ತೊಂದು ಲಾರಿ ಬಂದು ಅಪ್ಪಳಿಸಿದೆ.ಬಸ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ಪರಿಣಾಮ ರಸ್ತೆ ಸಂಪೂರ್ಣ ಬ್ಲಾಕ್ ಆಗಿ ನೂರಾರು ವಾಹನಗಳು ಘಾಟಿಯಲ್ಲಿ ಸಿಲುಕಿಕೊಂಡಿದ್ದವು.
ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.

