लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಆರಕ್ಷಕ ಠಾಣೆಗಳು ಜನಸ್ನೇಹಿ ಠಾಣೆಗಳಾಗಿ ಪರಿವರ್ತನೆಯಾಗಬೇಕು,….

1 min read

ಅವಿನ್ ಟಿವಿ ಸುದ್ದಿಜಾಲ ✒️: *” ಆರಕ್ಷಕ ಠಾಣೆಗಳು ಜನಸ್ನೇಹಿ ಠಾಣೆಗಳಾಗಿ ಪರಿವರ್ತನೆಯಾಗಬೇಕು, ದರ್ಪದಿಂದ ವರ್ತಿಸುವುದು ಇಲಾಖೆಯ ಘನತೆಗೆ ತಕ್ಕ ನಡವಳಿಕೆಯಲ್ಲ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ*

ಬೆಂಗಳೂರು: ಪೊಲೀಸ್ ಅಧಿಕಾರಿಗಳು ತಮ್ಮ ಅಧಿಕಾರ ಚಲಾಯಿಸುವಾಗ ನಾಗರಿಕರೊಂದಿಗೆ ಸೌಜನ್ಯದಿಂದ ಮತ್ತು ಗೌರವದಿಂದ ವರ್ತಿಸಬೇಕು. ಅಧಿಕಾರ ದುರುಪಯೋಗಪಡಿಸಿಕೊಂಡು ಸಾರ್ವಜನಿಕರ ಮೇಲೆ ಅನಗತ್ಯ ಬಲ ಪ್ರಯೋಗ ಅಥವಾ ದರ್ಪದ ವರ್ತನೆ ತೋರುವುದು ಇಲಾಖೆಯ ಘನತೆಗೆ ತಕ್ಕುದಾದ ನಡವಳಿಕೆಯಲ್ಲ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ಇಲಾಖೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇತ್ತೀಚಿಗೆ ಈ ಬಗ್ಗೆ ರಾಜ್ಯದ ಎಲ್ಲ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸುತ್ತೋಲೆ ಹೊರಡಿಸಿರುವ ಅವರು, ಪೊಲೀಸ್ ಇಲಾಖೆಯ ಬಗ್ಗೆ ಸಮಾಜದಲ್ಲಿ ಉತ್ತಮ ಅಭಿಪ್ರಾಯ ಮೂಡಿಸಲು ಮತ್ತು ಸಮುದಾಯದ ಜೊತೆಗಿನ ಸಂಬಂಧವನ್ನು ಬಲಪಡಿಸಲು, ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳಬೇಕು ಎಂದಿದ್ದಾರೆ.

ಪೊಲೀಸ್ ಠಾಣೆಗೆ ಭೇಟಿ ನೀಡುವ ಪ್ರತಿಯೊಬ್ಬ ವ್ಯಕ್ತಿಯನ್ನು ಅವರ ಸಾಮಾಜಿಕ ಅಥವಾ ಆರ್ಥಿಕ ಹಿನ್ನೆಲೆ ನೋಡದೆ ಸಮಾನವಾಗಿ ಪರಿಗಣಿಸಬೇಕು. ಸಾರ್ವಜನಿಕರ ಕುಂದುಕೊರತೆಗಳನ್ನು ತಾಳ್ಮೆಯಿಂದ ಆಲಿಸಿ ಕಾನೂನು ಪ್ರಕಾರ ವಿಳಂಬವಿಲ್ಲದೆ ದೂರುಗಳನ್ನು ದಾಖಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ *(ಪೋಲಿಸ್ ಭಾಷೆ )* ಅಥವಾ ವರ್ತನೆಯನ್ನು ಸಂಪೂರ್ಣವಾಗಿ ತ್ಯಜಿಸಿ ಸೌಜನ್ಯ ಮತ್ತು ಘನತೆಯಿಂದ ವರ್ತಿಸಬೇಕು. ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳಿಂದ ಬೇಡಿಕೆ ಇಡುವುದು ಅಥವಾ ಅಕ್ರಮ ಸಹಾಯ, ಲಾಭ ಸ್ವೀಕರಿಸುವುದರಿಂದ ದೂರವಿರಬೇಕು ಎಂದು ಡಾ.ಎಂ.ಎ. ಸಲೀಂ ಸೂಚಿಸಿದ್ದಾರೆ.
•••••••••••••••••
ಡಿ.ಎಂ.ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ ✒️
ಚಿಕ್ಕಮಗಳೂರು

About Author

Leave a Reply

Your email address will not be published. Required fields are marked *

You may have missed