ಮೊಬೈಲ್ ಬಿಡಿ ಪುಸ್ತಕ ಹಿಡಿ ದ್ಯೇಯ ವಾಕ್ಯದೊಂದಿಗೆ ಸಾಹಿತ್ಯ ಪರಿಷತ್ತು ಯುವ ಘಟಕ ಮುನ್ನಡೆಯಬೇಕಾಗಿದೆ*….
1 min read
ಚಿಕ್ಕಮಗಳೂರು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತು, ಯುವ ಘಟಕದ ನೂತನ ಅಧ್ಯಕ್ಷರಾಗಿ ಶ್ರೀಮತಿ, ಪ್ರಿಯಾಂಕ ಭರತ್ ಅಧಿಕಾರ ಸ್ವೀಕಾರ
*ಮೊಬೈಲ್ ಬಿಡಿ ಪುಸ್ತಕ ಹಿಡಿ ದ್ಯೇಯ ವಾಕ್ಯದೊಂದಿಗೆ ಸಾಹಿತ್ಯ ಪರಿಷತ್ತು ಯುವ ಘಟಕ ಮುನ್ನಡೆಯಬೇಕಾಗಿದೆ*
ಕಡೂರು ಇತ್ತೀಚೆಗೆ ಮೊಬೈಲ್ ಸಂಸ್ಕೃತಿ ಹೆಚ್ಚಾಗಿದೆ ಆ ಮೂಲಕ ಪುಸ್ತಕ ಓದುವ ಹಾಗೂ ಪುಸ್ತಕ ಸಂಗ್ರಹಿಸುವ ಪದ್ಧತಿ, ನಶಿಸಿ ಹೋಗುತ್ತಿದೆ ಆದುದರಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಯುವ ಘಟಕ ಸಾರ್ವಜನಿಕವಾಗಿ ಮೊಬೈಲ್ ಬಿಡಿ ಪುಸ್ತಕ ಹಿಡಿ ಎನ್ನುವ ಹೊಸ ಧ್ಯೇಯ ವಾಕ್ಯದೊಂದಿಗೆ ಪ್ರತಿ ಮನೆಯಲ್ಲೂ ಪ್ರತಿ ವಿದ್ಯಾರ್ಥಿಯೂ ಪುಸ್ತಕ ಓದುವ ಸಂಸ್ಕೃತಿಯನ್ನು ಬೆಳೆಸಲು ಯುವ ಸಮುದಾಯ ಪಣತೊಡಬೇಕಾಗಿದೆ ಎಂದು ಸಾಹಿತ್ಯ ಸಂಸ್ಕೃತಿ ಚಿಂತಕರಾದ ಹಾಗೂ ಕಡೂರು ಕ್ಷೇತ್ರದ ಮಾಜಿ ಶಾಸಕರಾದ ವೈ ಎಸ್ ವಿ ದತ್ತ ತಿಳಿಸಿದರು.
ಅವರು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಯುವ ಘಟಕವನ್ನು ಪಟ್ಟಣದ ಪಾಂಡುರಂಗ ಕಲ್ಯಾಣ ಮಂಟಪದಲ್ಲಿ ಉದ್ಘಾಟಿಸಿ ಮಾತನಾಡಿ ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ ಇಂತಹ ಭಾಷೆ ಬೇರೆ ಯಾವ ಭಾಷೆಯಲ್ಲಿ ಇಷ್ಟು ಸುಂದರವಾದ ಭಾಷೆ ಸಿಗಲು ಸಾಧ್ಯವಿಲ್ಲ ಯುವ ಸಮುದಾಯ ಪುಸ್ತಕಗಳನ್ನು ಪ್ರೀತಿಸಿ ಅವುಗಳನ್ನು ಕೊಂಡು ಓದುವಂತೆ ಸಾರ್ವಜನಿಕ ವಲಯದಲ್ಲಿ ಪ್ರೋತ್ಸಾಹಿಸಬೇಕು ಆ ಮೂಲಕ ಮೊಬೈಲ್ ಸಂಸ್ಕೃತಿಯಿಂದ ಪುಸ್ತಕ ಸಂಸ್ಕೃತಿಯ ಕಡೆಗೆ ಒಲವು ತೋರುವಂತೆ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.
ಚಿಕ್ಕಮಗಳೂರು ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಿರ್ಮಾಣ ಹಂತದಲ್ಲಿರುವ ಕನ್ನಡ ಭವನದ ಮುಂದುವರಿದ ಕಾಮಗಾರಿಗೆ ರಾಜ್ಯಸಭಾ ಸದಸ್ಯರು ಮಾಜಿ ಪ್ರಧಾನಿಗಳು ಆದ ಹೆಚ್ ಡಿ ದೇವೇಗೌಡ ಅವರ ಅನುದಾನದಿಂದ ಒಟ್ಟು 20 ಲಕ್ಷ ರೂಪಾಯಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್ ನೀಡಲು ಮನವಿ ಮಾಡಿದ್ದಾರೆ. ಆದರೆ ಅದರಲ್ಲಿ 10 ಲಕ್ಷ ರೂಪಾಯಿಗಳನ್ನು ಡಿಸೆಂಬರ್ ಮೊದಲ ವಾರದಲ್ಲಿ ಕೊಡಿಸಲಾಗುವುದು ಬಾಕಿ ಉಳಿದ 10 ಲಕ್ಷ ರೂಪಾಯಿಗಳನ್ನು ನಂತರ ನೀಡಲಾಗುವುದು ಎಂದು ತಿಳಿಸಿ ಕನ್ನಡ ಕಾಯಕಕ್ಕೆ ನಾವೆಲ್ಲರೂ ಕಂಕಣಬದ್ಧರಾಗಿ ಶ್ರಮಿಸೋಣ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ ಕಡೂರು ಪಟ್ಟಣದಲ್ಲಿರುವ ಕನ್ನಡ ಭವನದ ಎರಡನೇ ಅಂತಸ್ತಿನಲ್ಲಿ ಕಡೂರು ಕ್ಷೇತ್ರದ ಶಾಸಕರ ಅನುದಾನದಲ್ಲಿ ಗ್ರಂಥಾಲಯ ಪ್ರಾರಂಭಿಸಲು ಕಡೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್ಎಸ್ ವೆಂಕಟೇಶ್ ಅವರು ಜಿಲ್ಲಾ ಯುವ ಘಟಕದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ, ರೂಪ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯದಲ್ಲಿಯೇ ವಿನೂತನವಾದ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಇತರೆ ಜಿಲ್ಲೆಗಳಿಗೆ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಬಿ. ಪ್ರಕಾಶ್ ಅವರು ಜಿಲ್ಲಾ ಯುವ ಘಟಕದ ಪದಾಧಿಕಾರಿಗಳಿಗೆ ಪರಿಷತ್ತಿನ
ಧ್ವಜ ಹಸ್ತಾಂತರಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಯುವ ಘಟಕವನ್ನು ಪ್ರಾರಂಭಿಸುವ ಮೂಲಕ ಯುವಕರನ್ನು ಕನ್ನಡ ಸಾಹಿತ್ಯ ಪರಿಷತ್ತಿ ನಡೆಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಗುತ್ತದೆ ಯುವ ಸಮುದಾಯ ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಹಾಗಾಗಿ ಕನ್ನಡದ ಪ್ರೀತಿಯನ್ನು ಉಳಿಸುವ ಶಕ್ತಿ ಯುವಕರಲ್ಲಿದೆ ಎಂದು ಅವರು ತಿಳಿಸಿದರು.
ಚಿಕ್ಕಮಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಯುವ ಘಟಕದ ಅಧ್ಯಕ್ಷ ರೋಹನ್ ಅವರು ಮಾತನಾಡಿ ಮುಂದಿನ ದಿನಗಳಲ್ಲಿ ಪರಿಷತ್ತನ್ನು ಯುವಕರ ಒಡಗೂಡಿ ಉತ್ತಮವಾದ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಲಾಗುವುದು ಅದಕ್ಕೆ ಹಿರಿಯರ ಮಾರ್ಗದರ್ಶನ ಅವಶ್ಯವಿದೆ ಎಂದು ಅವರು ತಿಳಿಸಿದರು.
ಕಡೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಿಕ್ಕನಲ್ಲೂರು ಎಸ್ ಪರಮೇಶ್ ಆಶಯ ನುಡಿ ನುಡಿದರು.
ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಯುವ ಘಟಕದ ಜಿಲ್ಲಾಧ್ಯಕ್ಷ ಪ್ರಿಯಾಂಕ ಭರತ್ ಧ್ವಜ ಸ್ವೀಕರಿಸಿ ಸದ್ಯವೇ ನಮ್ಮ ಜಿಲ್ಲೆಯಲ್ಲಿ ಯುವ ಸಾಹಿತ್ಯ ಸಮ್ಮೇಳನವನ್ನು ಹಿರಿಯರ ಮಾರ್ಗದರ್ಶನ ಅನುಭವಿಗಳ ಸಲಹೆ ಪಡೆದು ನಡೆಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ವೈಭವ್ ನಾಯಕ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷರಾದ ಹೆಚ್ ಕೆ ಮಂಜುನಾಥ್, ನಿಕಟಪೂರ್ವ ಅಧ್ಯಕ್ಷ ಸಾಹಿತಿ ಸಿಂಗಟಗೆರೆ ಸಿದ್ದಪ್ಪ ತಾಲೂಕಿನ ಎಲ್ಲಾ ಪದಾಧಿಕಾರಿಗಳು ಜಿಲ್ಲಾ ಯುವ ಘಟಕದ ಪದಾಧಿಕಾರಿಗಳಾದ ಚಿಕ್ಕಮಗಳೂರು ತಾಲೂಕು, ಮಹಿಳಾ ಘಟಕದ ಅಧ್ಯಕ್ಷರಾದ ವಿಜಯಲಕ್ಷ್ಮಿ ವಿಶ್ವನಾಥ್ ಮತ್ತು ನಗರ ಘಟಕದ ಸಚಿನ್, ಕಡೂರು ಘಟಕದ ಕಡೂರು ತಾಲೂಕು ಯುವ ಘಟಕದ ಅಧ್ಯಕ್ಷ ಚೇತನ್ ಕುಮಾರ್ ಮೂಡಿಗೆರೆ ಘಟಕದ ಚಂದ್ರು ಒಡೆಯರ್ ಚಿಕ್ಕಮಗಳೂರು ಘಟಕದ ರೋಹನ್ ಭಾರ್ಗವ್ ಶೃಂಗೇರಿ ತಾಲೂಕಿನ ಸಚಿನ್ ನರಸಿಂಹರಾಜಪುರದ ಸತ್ಯ ಪ್ರಕಾಶ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರಾದ ಲತಾ ರಾಜಶೇಖರ್, ನಿಕಟಪೂರ್ವ ಅಧ್ಯಕ್ಷರಾದ ಸವಿತಾ ಸತ್ಯನಾರಾಯಣ, ಜಿಲ್ಲಾ ಸಂಚಾಲಕರಾದ ಪದ್ಮಾವತಿ ಶ್ರೀನಿವಾಸ್ ಹಾಗೂ ಶೋಭಾ ಶ್ರೀನಿವಾಸ್, ಘಟಕದ ಅಧ್ಯಕ್ಷಗಳಾದ ಕೆ ಜಿ ವಸಂತಕುಮಾರ್ ರವಿಚಂದ್ರನ್ ಲಲಿತ ಮಂಜುಳಾ ಸಾವಿತ್ರಿ ಸಾವಿತ್ರಮ್ಮ, ಭರತ್, ರಾಜಶೇಖರ್ ಮುಂತಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನ ಕಲಾ ಕದಂಬ ಆರ್ಟ್ ಸೆಂಟರ್ ಅವರಿಂದ ಯಕ್ಷಗಾನ ತಂಡ, ಯಕ್ಷಗಾನ ಪ್ರದರ್ಶನ ಮಾಡಿತು ಅದರ ನಿರ್ದೇಶಕ ಡಾಕ್ಟರ್ ರಾಧಾಕೃಷ್ಣ ಉರಾಳ ಮತ್ತು ವಸಂತಗೌಡ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು.

