लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಹಳಸೆ ಶಿವಣ್ಣರವರ ನೇತೃತ್ವದ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗ ಕೇಂದ್ರ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಸನ್ಮಾನ್ಯ ಶ್ರೀ ಭೂಪೇಂದ್ರ ಯಾದವ್ ರವರನ್ನು ಭೇಟಿ…..

1 min read

ದಿನಾಂಕ 09.02.2026 ರಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಹಳಸೆ ಶಿವಣ್ಣರವರ ನೇತೃತ್ವದ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗ ಕೇಂದ್ರ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಸನ್ಮಾನ್ಯ ಶ್ರೀ ಭೂಪೇಂದ್ರ ಯಾದವ್ ರವರನ್ನು ಭೇಟಿ ಮಾಡಿ ದಶಕಗಳಿಂದ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಭಾಗಗಳಲ್ಲಿ ಅತ್ಯಂತ ಗಂಭೀರ ಪಿಡುಗಾಗಿರುವ ಆನೆ-ಮಾನವ ಸಂಘರ್ಷದ ಬಗ್ಗೆ ಗಮನ ಸೆಳೆಯಿತು.

ಸುದೀರ್ಘ ಚರ್ಚೆಯ ಸಂದರ್ಭದಲ್ಲಿ ಮಾನ್ಯ ಸಚಿವರು ತಮ್ಮ ಸಚಿವಾಲಯಕ್ಕೆ ಈ ಸಮಸ್ಯೆ ಕುರಿತು ಸಂಪೂರ್ಣ ಅರಿವಿರುವುದಾಗಿಯೂ ಇದರ ನಿವಾರಣೆಗಾಗಿ ಕೇಂದ್ರ ಸರ್ಕಾರದ ಎಲ್ಲ ರೀತಿಯ ಸಹಕಾರವನ್ನು ನೀಡುವುದಲ್ಲದೇ, ಅಗತ್ಯವಾದ ನಿಧಿಯನ್ನು ಕೂಡಾ ಮೀಸಲಿಟ್ಟಿರುವುದಾಗಿ ತಿಳಿಸಿರುತ್ತಾರೆ. ಹಾಗೂ ಈ ವಿಚಾರ ಸಂಬಂಧ ಕೇಂದ್ರದ ಅರಣ್ಯ ಮತ್ತು ಪರಿಸರ ಸಚಿವಾಲಯದ ಹೆಚ್ಚುವರಿ ಮಹಾನಿರ್ದೇಶಕರಾದ ಶ್ರೀ ರಮೇಶ್ ಕೆ. ಪಾಂಡೆ ಐ.ಎಫ್.ಎಸ್ ರವರನ್ನು ಭೇಟಿ ಮಾಡುವಂತೆಯೂ ತಿಳಿಸಿರುತ್ತಾರೆ.

ಮುಂದುವರೆದಂತೆ ಒಕ್ಕೂಟದ ನಿಯೋಗವು ಶ್ರೀ ರಮೇಶ್ ಕೆ.ಪಾಂಡೆಯವರನ್ನು ಭೇಟಿ ಮಾಡಿ ಚರ್ಚಿಸಿದೆ. ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯು ಈಗಾಗಲೇ ಭಾರತದ ಸುಮಾರು 8 ರಾಜ್ಯಗಳಲ್ಲಿ ವ್ಯಾಪಿಸಿರುವ ಮಾನವ-ಆನೆ ಸಂಘರ್ಷದ ಕುರಿತು ಮಾಹಿತಿ ಹೊಂದಿರುವುದಾಗಿಯೂ ಈ ಸಮಸ್ಯೆಗೆ ಆದಷ್ಟು ಶೀಘ್ರವಾಗಿ ಪರಿಹಾರ ಕಂಡುಕೊಳ್ಳಲು ಸಮಗ್ರವಾದ ಕ್ರಿಯಾಯೋಜನೆ ಸಿದ್ಧವಿರುವುದಾಗಿ ತಿಳಿಸಿರುತ್ತಾರೆ.

ನಿಯೋಗವು ಕೇಂದ್ರದ ಅರಣ್ಯ ಮತ್ತು ಪರಿಸರ ಸಚಿವಾಲಯದ ಜೊತೆ ನಿಕಟ ಸಂಪರ್ಕದಲ್ಲಿರುವಂತೆಯೂ ಮತ್ತು ರಾಜ್ಯ ಸರ್ಕಾರಕ್ಕೆ ಈ ಯೋಜನೆ ಜಾರಿಗೊಳಿಸಲು CAMPA ನಿಧಿಯಿಂದ ಹಣ ಒದಗಿಸಲು 16ನೇ ಯೋಜನೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಿರುತ್ತಾರೆ.

ಇದೇ ಸಂದರ್ಭದಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದಿಂದ ಸಿದ್ದಪಡಿಸಲಾದ ಮಾನವ-ಆನೆ ಸಂಘರ್ಷದ ಕುರಿತಾದ ಸಂಕ್ಷಿಪ್ತ ಸಾರಾಂಶದ ವರದಿಯ ಪ್ರತಿಯನ್ನು ಮಾನ್ಯ ಸಚಿವರಿಗೂ ಹಾಗೂ ಕೇಂದ್ರ ಸರ್ಕಾರದ ಹೆಚ್ಚುವರಿ ಮಹಾನಿರ್ದೇಶಕರಿಗೂ ನೀಡಲಾಯಿತು.

ಮೇ ತಿಂಗಳ ಮೂರನೇ ವಾರದಲ್ಲಿ ರಾಜ್ಯ ಸರ್ಕಾರ, ಬೆಳೆಗಾರರ ಒಕ್ಕೂಟ, ಹಾಗೂ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ನಡುವೆ ಸಮನ್ವಯ ಸಭೆ ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಿರುವುದಾಗಿಯೂ ಮಾಹಿತಿ ನೀಡಿರುತ್ತಾರೆ. ಕರ್ನಾಟಕ ರಾಜ್ಯ ಅರಣ್ಯ ಇಲಾಖೆಗೆ ಆನೆ-ಮಾನವ ಸಂಘರ್ಷ ನಿವಾರಣೆಗಾಗಿ ಕೇಂದ್ರ ಸರ್ಕಾರ ತನ್ನೆಲ್ಲಾ ಸಹಕಾರ ನೆರವನ್ನು ನೀಡುವುದಾಗಿಯೂ ಭರವಸೆ ನೀಡಿರುತ್ತಾರೆ.

ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಹಳಸ ಶಿವಣ್ಣ, ಉಪಾಧ್ಯಕ್ಷರಾದ ಶ್ರೀ ಕೆ.ಕೆ.ವಿಶ್ವನಾಥ್, ಚಿಕ್ಕಮಗಳೂರು ಜಿಲ್ಲಾ ಬೆಳೆಗಾರರ ಸಂಘದ ಅಧ್ಯಕ್ಷರಾದ ಶ್ರೀ ಕೆ.ಯು.ರತೀಶ್, ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಕಾರ್ಯದರ್ಶಿ ಶ್ರೀ ಕೆ.ಡಿ.ಮನೋಹರ್ ಹಾಗೂ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಖಜಾಂಚಿ ಶ್ರೀ ಎಂ.ಜೆ.ಸಚಿನ್‌ರವರು ನಿಯೋಗದಲ್ಲಿದ್ದರು.

About Author

Leave a Reply

Your email address will not be published. Required fields are marked *

You may have missed