लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಗೌರವ ಧನ ಹೆಚ್ಚಿಸುವ ಆರನೇ ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಮಾ.2.ರಂದು ಬೆಂಗಳೂರು ಚಲೋ….

1 min read

ಗೌರವ ಧನ ಹೆಚ್ಚಿಸುವ ಆರನೇ ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಮಾ.2.ರಂದು ಬೆಂಗಳೂರು ಚಲೋ
‎
‎ಚಿಕ್ಕಮಗಳೂರು : ಗೌರವ ಧನ ಹೆಚ್ಚಿಸುವ
‎ಆರನೇ ಗ್ಯಾರಂಟಿಯ ಜಾರಿಯೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಗ್ರಹಿಸಿ ಮಾ.2.ರಂದು ಬಜೆಟ್ ಪೂರ್ವ ಬೆಂಗಳೂರು ಚಲೋ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತುಸಹಾಯಕಿಯರ ಫೆಡರೇಷನ್ ರಾಜ್ಯಾಧ್ಯಕ್ಷ ಬಿ.ಅಮ್ಬದ್ ತಿಳಿಸಿದರು.
‎
‎ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ಕರೆದಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಅಂಗನವಾಡಿ ಕಾರ್ಯಕರ್ತೆಯರು ಮತ್ತುಸಹಾಯಕಿಯರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ಗಮನ ಸೆಳೆಯಲು ಮಾ.02.ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ  ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
‎
‎ರಾಜ್ಯ ಸರ್ಕಾರದ ಆರನೇ ಗ್ಯಾರಂಟಿಯ ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ. 15000 ಹಾಗೂ ಸಹಾಯಕಿಯರಿಗೆ ಹೆಚ್ಚಿಸಿ ಜಾರಿಗೊಳಿಸಿ, ರೂ. 10000 ಗೌರವ ಧನನೀಡುವುದು, 2011 ರಿಂದ ನಿವೃತ್ತರಾಗಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಜಾರಿಗೊಳಿಸಿ. ಹಾಗೂ ಈಗಾಗಲೇ ಸ್ವಯಂ ನಿವೃತ್ತಿಯಾಗಿರುವವರಿಗೂ ಗ್ರಾಚ್ಯುಟಿ ನೀಡಬೇಕೆಂದು ಆಗ್ರಹಿಸಲಾಗುವುದೆಂದರು.
‎
‎ಬಲವಂತವಾಗಿ ಬಿ.ಎಲ್. ಓ ಜವಾಬ್ದಾರಿ ಹೊರಿಸಿ ಜವಾಬ್ದಾರಿ ನಿರಾಕರಿಸುವ ಕಾರ್ಯಕರ್ತೆಯರ ವಿರುದ್ಧ ಕ್ರಮ ಜರುಗಿಸುವುದು ನಿಲ್ಲಿಸಬೇಕು.ಅಂಗನವಾಡಿ ಅಮಾನತ್ತುಗೊಳಿಸುತ್ತಿರುವುದನ್ನು ಕೇಂದ್ರಗಳಲ್ಲಿಯೇ ಎಲ್‌ಕೆಜಿ ‘ಯು ಕೆ ಜಿ ಗಳನ್ನು ಪ್ರಾರಂಭಿಸಿ ಅಂಗನವಾಡಿ ವ್ಯವಸ್ಥೆಯನ್ನು ಬಲವರ್ಧನೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.
‎
‎’ಅಂಗನವಾಡಿಗಳಿಗೆ ಬರುವ ಮಕ್ಕಳಿಗೆ ಪೌಷ್ಟಿಕ ಆಹಾರ ತರಕಾರಿ ವೆಚ್ಚ ಹೆಚ್ಚಿಸಬೇಕು. ಡಿ.ಎ.ಹೆಚ್ಚಳಮಾಡುವುದು, ಹಾಗೂ ಇದನ್ನು ನಗರ ಪ್ರದೇಶದ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುವವ ರಿಗೂ ವಿಸ್ತರಿಸಬೇಕು. ಮಾತೃವಂದನ, ಭಾಗ್ಯಲಕ್ಷ್ಮಿ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಅಂಗನವಾಡಿಗಳಿಗೆ “ ಸಕಾಲದಲ್ಲಿ ಬಾಡಿಗೆ ಬಿಡುಗಡೆ ಮಾಡುವುದು, ಕೇಂದ್ರ ಸರ್ಕಾರ ಅನುಮೋದನೆ ನೀಡದೆ ಇರುವ ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಹಣ ಮತ್ತು ಪೋಷನ್ ಅಭಿಯಾನದ ಪ್ರೋತ್ಸಾಹ ಧನ ನೀಡುವಂತೆ ಕ್ರಮ ಕೈಗೊಳ್ಳಬೇಕೆಂಬುದು ನಮ್ಮ ಬೇಡಿಕೆ ಎಂದರು.
‎
‎ಶಸ್ತ್ರಚಿಕಿತ್ಸೆ ಸೇರಿದಂತೆ ಎಲ್ಲಾ ರೀತಿಯ ಚಿಕಿತ್ಸೆಗಾಗಿ ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯಕ್ಕೆ ಒಳಗಾದ ಅವಧಿಯನ್ನು ವೇತನ ಸಹಿತ ವೈದ್ಯಕೀಯ ರಜೆ ಎಂದು ಪರಿಗಣಿಸುವುದು, ಪ್ರಭಾರ ಭತ್ಯೆಹೆಚ್ಚಳ,ಮಾರುಕಟ್ಟೆ ದರಕ್ಕನುಗುಣವಾಗಿ ಮೊಟ್ಟೆ ಹಣ ಬಿಡುಗಡೆ,

ಗೋಷ್ಟಿಯಲ್ಲಿ ಹಿರಿಯ ಮುಖಂಡರಾದ ಸುಂದರೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿಎಂ. ಜಯಮ್ಮ ಜಿಲ್ಲಾಧ್ಯಕ್ಷೆ ಗ್ರೇಟಾ ಪರ್ನಾಡಿಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಾವತಿ ಇದ್ದರು.

About Author

Leave a Reply

Your email address will not be published. Required fields are marked *

You may have missed